ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎ1 ಆಗಿರುವ ಪವಿತ್ರಾ ಗೌಡಗೆ ಮತ್ತೆ ನಿರಾಸೆ ಆಗಿದೆ. ಹೌದು ರೇಣುಕಾಸ್ವಾಮಿ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21 ಕ್ಕೆ ಹೈಕೋರ್ಟ್ ಮುಂದೂಡಿದೆ. ಪವಿತ್ರಾ ಗೌಡ , ಅನುಕುಮಾರ್.
ನಾಗರಾಜ್, ಲಕ್ಷ್ಮಣ್, ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆದಿದೆ.
ಈ ಪೈಕಿ ಎ-1 ಆರೋಪಿ ಪವಿತ್ರಾಗೌಡಗೆ ಜೈಲೇ ಗತಿ ಆಗಿದ್ದು, ನ.21 ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಆಗಿದ್ದು, ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಎಸ್ಪಿಪಿ ಪ್ರಸನ್ನಕುಮಾರ್ ಮನವಿ ಮಾಡಿದರು. ಕೋರ್ಟ್ ನ.21 ರಂದು ಪವಿತ್ರಗೌಡ, ದರ್ಶನ್, ಅನುಕುಮಾರ್, ಲಕ್ಷ್ಮಣ್, ನಾಗರಾಜ್ ಜಾಮೀನು ಅರ್ಜಿ ವಿಚಾರಣೆಗೆ ನಿಗದಿಪಡಿಸಿದೆ.