ಬೆಂಗಳೂರು:- ಬಿಬಿಎಂಪಿ ಇತ್ತೀಚೆಗೆ ಕಾಮಗಾರಿ ಕೈಗೊಂಡ ಹಿನ್ನೆಲೆ, ಬೆಂಗಳೂರಿನ ಈ ರಸ್ತೆಯಲ್ಲಿ 1 ತಿಂಗಳು ಸಂಚಾರ ಬಂದ್ ಇರಲಿದೆ ಎನ್ನಲಾಗಿದೆ. ಹೀಗಾಗಿ ವಾಹನ ಸವಾರರು ಅಪ್ಪಿತಪ್ಪಿಯೂ ಇಲ್ಲಿ ಸಂಚರಿಸಬೇಡಿ.
ಎಸ್ ರಾಜಧಾನಿ ಬೆಂಗಳೂರಿನ ಶಿವಾಜಿನಗರದ ಈ ರಸ್ತೆಗಳಲ್ಲಿ ಒಂದು ತಿಂಗಳ ಕಾಲ ಸಂಚಾರ ನಿರ್ಬಂಧಿಸಲಾಗಿದೆ.
ಶಿವಾಜಿ ಸರ್ಕಲ್ ಮತ್ತು ಜ್ಯೋತಿ ಕೆಫೆ ಬಳಿ ಮೆಟ್ರೋ ವತಿಯಿಂದ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ 30 ದಿನಗಳ ಕಾಲ ಈ ಕೆಳಗಿನ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಬಾಳೆಕುಂದ್ರಿಯಿಂದ ಶಿವಾಜಿ ಸರ್ಕಲ್ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಬಿಎಂಟಿಸಿ ಬಸ್ ಮತ್ತು ಎಲ್ಲಾ ಮಾದರಿಯ ವಾಹನಗಳಿಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
ಶಿವಾಜಿ ರಸ್ತೆಯ ಮೂಲಕ ಶಿವಾಜಿ ಸರ್ಕಲ್ ಕಡೆಯಿಂದ ಜೋತಿ ಕೆಫೆ ,ಮತ್ತು ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳಿಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
ಬಾಳೆಕುಂದ್ರಿಯಿಂದ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಬಸ್ ಹಾಗೂ ಎಲ್ಲಾ ಮಾದರಿಯ ವಾಹನಗಳು ಟ್ರಾಫಿಕ್ ಹೆಡ್ ಕ್ವಾರ್ಟರ್ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಇನ್ಫೆಂಟ್ರಿ ರಸ್ತೆಯ ಮೂಲಕ ಸೆಂಟ್ರಲ್ ಸ್ಟ್ರೀಟ್ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಸೆಂಟ್ರಲ್ ಸ್ಟ್ರೀಟ್ ರಸ್ತೆಯ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.
ಶಿವಾಜಿ ರಸ್ತೆಯಿಂದ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಎಲ್ಲಾ ಮಾದರಿಯ ವಾಹನಗಳು ಶಿವಾಜಿ ಸರ್ಕಲ್ನಲ್ಲಿ ಬಲ ತಿರುವು ಪಡೆದು ವೆಂಕಟಸ್ವಾಮಿ ನಾಯ್ಡು ರಸ್ತೆಯ ಮೂಲಕ ಬಾಳೆಕುಂದ್ರಿ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಟ್ರಾಫಿಕ್ ಹೆಡ್ ಕ್ವಾಟರ್ಸ್ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಇನ್ಫೆಂಟ್ರಿ ರಸ್ತೆಯ ಮೂಲಕ ಸೆಂಟ್ರಲ್ ಸ್ಟ್ರೀಟ್ ಜಂಕ್ಷನ್ನಲ್ಲಿ ಎಡ ತಿರುವು ತೆಗೆದುಕೊಂಡು ಸೆಂಟ್ರಲ್ ಸ್ಟ್ರೀಟ್ ರಸ್ತೆಯ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.