ಕಲಬುರಗಿ:- ಇಲ್ಲಿನ ಕಮಲಾಪುರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ ಘಟನೆ ಜರುಗಿದೆ.
ಹೈದರಾಬಾದ್ ನ ಭಾರ್ಗವ ಕೃಷ್ಣ (55), ಇವರ ಪತ್ನಿ ಸಂಗೀತಾ (45), ಪುತ್ರ ಉತ್ತಮ ರಾಘವನ್ (28) ಮೃತಪಟ್ಟವರು ಎಂದು ತಿಳಿದು ಬಂದಿದೆ.
ಮೃತ ಚಾಲಕನ ಗುರುತು ಪತ್ತೆಯಾಗಿಲ್ಲ.
ಇವರೆಲ್ಲರೂ ಹೈದರಾಬಾದ್ ನಿವಾಸಿಗಳಾಗಿದ್ದು ಜಿಲ್ಲೆಯ ಧಾರ್ಮಿಕ ಕ್ಷೇತ್ರ ಗಾಣಗಾಪುರದ ದತ್ತನ ದರ್ಶನಕ್ಕೆ ತೆರಳುತ್ತಿದ್ದರು. ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು ಕುಟುಂಬಸ್ಥರು ಬರುವವರೆಗೆ ನಿಖರ ಮಾಹಿತಿ ಗೊತ್ತಾಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಪಿಐ ಶಿವಶಂಕರ ಸಾಹು, ಮಹಾಗಾಂವ ಪಿಎಸ್ಐ ಆಶಾ ರಾಠೋಡ್, ಸಿಬ್ಬಂದಿಯಾದ ಕುಪೇಂದ್ರ, ಕಿಶನ್, ಹುಸೇನ ಪಟೇಲ ಮತ್ತಿತರರು ಮೃತ ದೇಹಗಳನ್ನು ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿದರು, ವಾಹನ ಬದಿಗೆ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.