ಬೆಂಗಳೂರು:- ವಿದ್ಯುತ್ ತಂತಿ ತಗುಲಿ ಬಾಲಕಿ ಸಾವನ್ನಪ್ಪಿದ ಘಟನೆ ವರ್ತೂರುವಿನ ಪ್ರೆಸ್ಟೀಜ್ ಹೆಬಿಟೇಡ್ ಅಪಾರ್ಟ್ ಮೆಂಟ್ ನಲ್ಲಿ ಜರುಗಿದೆ.
10 ವರ್ಷದ ಮಾನ್ಯ ವಿದ್ಯುತ್ ತಂತಿ ತುಳಿದು ಮೃತ ಪಟ್ಟ ಬಾಲಕಿ ಎನ್ನಲಾಗಿದೆ. ನಿನ್ನೆ ಸಂಜೆ 7.30 ರ ಸುಮಾರಿಗೆ ಘಟನೆ ಜರುಗಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ಬಾಲಕಿಯನ್ನು ಸ್ಥಳೀಯರು ದಾಖಲಿಸಿದ್ದಾರೆ.
ಚಿಕಿತ್ಸೆ ಫಲಕಾರಿಯಾಗದೇ ಸಹಸ್ತ್ರ ಆಸ್ಪತ್ರೆಯಲ್ಲಿ ಬಾಲಕಿ ಮೃತ ಪಟ್ಟಿದ್ದಾರೆ. ಬಾಲಕಿ ಪೋಷಕರಿಂದ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.