ಮುಂಬೈ: ಮೊಬೈಲ್ (Mobile) ಬಳಸಲು ಅನುಮತಿ ನೀಡದ್ದಕ್ಕೆ ಬೇಸರಗೊಂಡ ಬಾಲಕಿಯೊಬ್ಬಳು (Girl) 7 ಅಂತಸ್ತಿನ ಕಟ್ಟಡದಿಂದ (Building) ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ (Mumbai) ನಡೆದಿದೆ.
ಪಶ್ಚಿಮ ಉಪನಗರದ ಮಾಲ್ವಾನಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 15 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಘಟನೆ ಕುರಿತು ಅಧಿಕಾರಿಯೊಬ್ಬರು ಮಾತನಾಡಿ, ಬಾಲಕಿಯ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಬಾಲಕಿಯ ಕುಟುಂಬಸ್ಥರು ಆಕೆಯ ಮೊಬೈಲ್ ಅನ್ನು ಕಿತ್ತುಕೊಂಡಿದ್ದರಿಂದ ಬೇಸರಗೊಂಡಿದ್ದಳು ಎಂದು ಶಂಕಿಸಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.