ಹುಬ್ಬಳ್ಳಿ: ಕುಂದಗೋಳ ತಾಲೂಕು ಪಂಚಾಯಿತಿ ಕಚೇರಿ ಎದುರು ನಿಲ್ಲಿಸಿದ್ದ ಬೈಕ್ ಆಕಸ್ಮಿಕವಾಗಿ ಹೊತ್ತಿ ಉರಿದ ಘಟನೆ ನಡೆದಿದೆ.
ಹೌದು ! ತಾಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಓರ್ವನ ಅಪಾಚಿ ಬೈಕ್ ಏಕಾಏಕಿ ಬೆಂಕಿ ಹೊತ್ತಿಕೊಂಡು ಧಗಧಗಿಸಲಾರಂಭಿಸಿದೆ.
ತಕ್ಷಣ ಬೈಕ್ ಹೊತ್ತಿ ಉರಿಯುವದನ್ನು ಕಂಡ ಸಿಬ್ಬಂದಿ ಬೆಂಕಿ ನಂದಿಸಲು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಗ್ನಿಶಾಮಕ ದಳದವರು ಸ್ಥಳ ತಲುಪುವ ಅಷ್ಟರಲ್ಲಾಗಲೇ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಕುಂದಗೋಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.