ತ್ರಿಪುರ: ಕಾಲೇಜು ವಿದ್ಯಾರ್ಥಿನಿ ಮೇಲೆ ಮೃಗೀಯವಾಗಿ ಅತ್ಯಾಚಾರ ನಡೆಸಿದ ಘಟನೆ ತ್ರಿಪುರಾದಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ ಪರಿಚಯಸ್ಥ ಮೂವರು ಯುವಕರು ಡ್ರಾಪ್ ಕೊಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡು ಚಲಿಸುತ್ತಿರುವ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ತೀವ್ರ ಅಸ್ವಸ್ಥಗೊಂಡ ವಿದ್ಯಾರ್ಥಿನಿಯನ್ನು ನಡು ರಸ್ತೆಯಲ್ಲೇ ಇಳಿಸಿ ಪರಾರಿಯಾಗಿದ್ದಾರೆ. ಯುವತಿ ತಾಯಿ ನೀಡಿದ ದೂರಿನ ಆಧಾರದಲ್ಲಿ ಇದೀಗ ಪೊಲೀಸರು ಓರ್ವ ಆರೋಪಿಯನ್ನು ಆರೆಸ್ಟ್ ಮಾಡಿದ್ದಾರೆ.
ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಕಾರಿನಲ್ಲಿ ಡ್ರಾಪ್ ಕೊಡಿಸುವುದಾಗಿ ಹೇಳಿ ಹತ್ತಿಸಿಕೊಂಡಿದ್ದಾರೆ. ಪರಿಚಯಸ್ಥ ಯುವಕರಾದ ಕಾರಣ ಕಾರಿಗೆ ಹತ್ತಿದ ಯುವತಿ ಮೇಲೆ ಮೂವರು ಯುವಕರು ಅತ್ಯಾಚಾರ ನಡೆಸಿದ್ದಾರೆ. ನಿರ್ಜನ ಪ್ರದೇಶದಲ್ಲಿ ಯುವತಿಯನ್ನು ಅಮಾತಲಿ ಬೈಪಾಸ್ ರಸ್ತೆಯಲ್ಲಿ ಇಳಿಸಿದ ಯುವಕರು ಪರಾರಿಯಾಗಿದ್ದಾರೆ. ಇತ್ತ ತೀವ್ರ ಅಸ್ವಸ್ಥಗೊಂಡಿರುವ ಯುವತಿಯನ್ನು ಜಿಬಿ ಪಂತ್ ಆಸ್ಪತ್ರೆಗೆ ದಾಖಲಿಸಲಾಗಿದೆ
. ದೈಹಿಕವಾಗಿ ಹಾಗೂ ಮಾನಸಿಕವಾಗಿ ಅಸ್ವಸ್ಥಗೊಂಡಿರುವ ವಿದ್ಯಾರ್ಥಿನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿನಿ ತಾಯಿ ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಇನ್ನಿಬ್ಬರಿಗಾಗಿ ಹುಡುಕಾಟ ಆರಂಭಗೊಂಡಿದೆ. ಮಹಿಳೆ ವಿರುದ್ಧ ದೌರ್ಜನ್ಯ ಸಹಿಸಲು ಸಾಧ್ಯವಿಲ್ಲ.ಹೀಗಾಗಿ ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಲಾಗುತ್ತದೆ ಎಂದು ತ್ರಿಪುರಾ ಸಿಎಂ ಹೇಳಿದ್ದಾರೆ.