ತುಮಕೂರು;– ಜಿಲ್ಲೆಯ ಶಿರಾ ತಾಲೂಕಿನ ಕಾಮಗೊಂಡನಹಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡ ಉಂಟಾಗಿರುವ ಘಟನೆ ಜರುಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಾಗಮಣಿ ಮತ್ತು ಮಗ ಮಿಥುನ್ ಗಾಯಾಳು ಎಂದು ಗುರುತಿಸಲಾಗಿದೆ.
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ ಮಗನಿಗೆ ಚಿಕಿತ್ಸೆ ಕೊಡಿಸಲಾಗಿದೆ. ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅವಘಡ ಸಂಭವಿಸಿದೆ. ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.