ಬೀದರ್: ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಪಾರ ಪ್ರಮಾಣದ ಅಂದರೆ 1 ಕೋಟಿ 18 ಲಕ್ಷದ ಮೌಲ್ಯದ ಒಟ್ಟು 118 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಬೀದರ್ ನಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸ್ವಿಫ್ಟ್ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಗಾಂಜಾ ಜಪ್ತಿ ಜೊತೆಗೆ ಒಂದು ಕಾರು, 3 ಮೊಬೈಲ್, ಹಾಗೂ 15 ಸಾವಿರ ನಗದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅರೆಸ್ಟ್ ಮಾಡಿದ್ದಾರೆ. ಬೀದರ್ ಎಸ್ಪಿ ಚೆನ್ನಬಸವಣ್ಣ ಲಂಗೋಟಿ ಮಾರ್ಗದರ್ಶನ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.