ಪ್ರತಿಷ್ಠಿತ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಕ್ರಿಕೆಟ್ ಸರಣಿ ಆರಂಭಕ್ಕೂ ಮೊದಲೇ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ ಭಾರಿ ಹಿನ್ನಡೆ ಎದುರಾಗಿದೆ. ಪ್ರವಾಸಿ ಟೀಮ್ ಇಂಡಿಯಾ ಎದುರು ಕಾಂಗರೂ ಪಡೆ ನಾಲ್ಕು ದಶಕಗಳಲ್ಲಿ ಇದೇ ಮೊದಲ ಬಾರಿ 5 ಪಂದ್ಯಗಳ ಟೆಸ್ಟ್ ಕ್ರಿಕೆಟ್ ಸರಣಿ ಆಡಲು ಎದುರು ನೋಡುತ್ತಿದೆ.
ಈ ಸಂದರ್ಭದಲ್ಲಿ ಪ್ರಮುಖ ಆಲ್ರೌಂಡರ್ ಕ್ಯಾಮೆರಾನ್ ಗ್ರೀನ್ ಗಾಯಗೊಂಡು ಸರಣಿಗೆ ಅಲಭ್ಯರಾಗಿದ್ದಾರೆ.
25 ವರ್ಷದ ಯುವ ಆಲ್ರೌಂಡರ್ ಕ್ಯಾಮೆರಾನ್ ಗ್ರೀನ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲಿದ್ದಾರೆ. ಈ ಸಲುವಾಗಿ ನಡೆಸಲಾದ ವೈದ್ಯಕೀಯ ತಪಾಸಣೆಯಲ್ಲಿ ಕ್ಯಾಮೆರಾನ್ ಗ್ರೀನ್ಗೆ ಶಸ್ತ್ರಚಿಕಿತ್ಸೆಗೆ ಒಳಪಡೆದರೆ ಬೇರೆ ದಾರಿಯಿಲ್ಲ ಎಂಬುದು ತಿಳಿದುಬಂದಿದೆ. ಹೀಗಾಗಿ ಮುಂದಿನ 6 ತಿಂಗಳು ಕಾಲ ಗ್ರೀನ್ ಕ್ರಿಕೆಟ್ನಿಂದ ಸಂಪೂರ್ಣವಾಗಿ ದೂರ ಉಳಿಯಲಿದ್ದಾರೆ. ಬಿಜಿಟಿ 2024-25 ಸರಣಿ ಮಾತ್ರವಲ್ಲ, 2025ರ ಫೆಬ್ರವರಿ-ಮಾರ್ಚ್ನಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೂ ಅಲಭ್ಯರಾಗಲಿದ್ದಾರೆ.
ಕಳೆದ ಸೆಪ್ಟೆಂಬರ್ನಲ್ಲಿನ ಆಸ್ಟ್ರೇಲಿಯಾ ಪ್ರವಾಸದ ವೇಳೆ ಕ್ಯಾಮೆರಾನ್ ಗ್ರೀನ್ ಬೆನ್ನು ನೋವಿನ ಸಮಸ್ಯೆ ಬಗ್ಗೆ ತಿಳಿಸಿದ್ದರು. ಈ ಸಲುವಾಗಿ ಅಗತ್ಯದ ಸ್ಕ್ಯಾನಿಂಗ್ಗೆ ಅವರನ್ನು ಒಳಪಡಿಸಲಾಗಿತ್ತು. ಅತಿಯಾದ ಕ್ರಿಕೆಟ್ ಕಾರಣ ಫಾಸ್ಟ್ ಬೌಲರ್ಗಳಲ್ಲಿ ಬೆನ್ನು ನೋವಿನ ಸಮಸ್ಯೆ ಸಾಮಾನ್ಯ. ಹೀಗಾಗಿ ಈ ಸಮಸ್ಯೆ ನಿವಾರಣೆಗೆ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾಗಿದೆ,” ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ.