ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ದಿನದಿಂದ ದಿನಕ್ಕೆ ಬೆನ್ನು ನೋವಿನ ಸಮಸ್ಯೆ ಜಾಸ್ತಿಯಾಗುತ್ತಿದೆ. ಈ ಹಿಂದೆ ಹಲವು ಬಾರಿ ಬೆಡ್ ಹಾಗೂ ದಿಬ್ಬಿಂಗಾಗಿ ದರ್ಶನ್ ಮನವಿ ಮಾಡಿದ್ದರು. ಆದ್ರೆ ನ್ಯಾಯಾಲಯ ಅದಕ್ಕೆ ಸಮ್ಮತಿ ನೀಡಿರಲಿಲ್ಲ. ಇದೀಗ ಬೆನ್ನು ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆಯಿಂದ ಮೆಡಿಕಲ್ ಬೆಡ್ ಹಾಗೂ ದಿಂಬನ್ನು ಒದಗಿಸಲಾಗಿದೆ.
ಮಂಗಳವಾರ ದರ್ಶನ್ ಮೆಡಿಕಲ್ ರಿಪೋರ್ಟ್ ಬಂದ ಬಳಿಕ ಜೈಲಾಧಿಕಾರಿ ಈ ಕುರಿತು ವೈದ್ಯಾಧಿಕಾರಿಗಳಿಗೆ ತಿಳಿಸಿದ್ದರು. ಈ ಹಿನ್ನೆಲೆ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಬುಧವಾರ ದರ್ಶನ್ಗೆ ಬೆಡ್ ಮತ್ತು ದಿಂಬನ್ನು ನೀಡಲಾಗಿದೆ. ವಿಮ್ಸ್ ನ್ಯೂರೋ ಸರ್ಜನ್ ಡಾ. ವಿಶ್ವನಾಥ್ ಬೆಡ್ ಮತ್ತು ದಿಂಬು ನೀಡುವಂತೆ ವರದಿಯಲ್ಲಿ ಉಲ್ಲೇಖಿಸಿದ್ದರು. ಹೀಗಾಗಿ ಇಂದು ಅಂಬುಲೆನ್ಸ್ ಮೂಲಕ ಬೆಡ್ ಮತ್ತು ದಿಂಬನ್ನು ಬಳ್ಳಾರಿ ಜೈಲಿಗೆ ರವಾನಿಸಲಾಗಿದೆ.
ಜೈಲು ಸಿಬ್ಬಂದಿ ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ತಪಾಸಣೆ ಮಾಡಿ ಹೈ ಸೆಕ್ಯೂರಿಟಿ ಸೆಲ್ ಒಳಗೆ ಬಿಟ್ಟಿದ್ದಾರೆ. ವೈದ್ಯರ ಮೆಡಿಕಲ್ ರಿಪೋರ್ಟ್ ಆಧರಿಸಿ ಜೈಲು ಅಧಿಕಾರಿಗಳು ಆರೋಪಿ ದರ್ಶನ್ಗೆ ಮೆಡಿಕಲ್ ಬೆಡ್, ಚೇರ್ ಹಾಗೂ ದಿಂಬನ್ನು ನೀಡಿದ್ದಾರೆ.