ಬೆಂಗಳೂರು: ಏಪ್ರಿಲ್ 27ರಂದು 50 ಲಕ್ಷ ಬಿಜೆಪಿ ಕಾರ್ಯಕರ್ತರ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ(Shobha Karandlaje) ಹೇಳಿದ್ದಾರೆ. ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ(Malleshwar BJP office) ಮಾತನಾಡಿದ ಅವರು,ರಾಜ್ಯದ 58,112 ಬೂತ್ಗಳಲ್ಲಿ, 1,680 ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಈ ಸಂವಾದವನ್ನು ಹಮ್ಮಿಕೊಳ್ಳಲಾಗಿದೆ.
ಬೂತ್ಗಳಲ್ಲಿ ಟಿ.ವಿಗಳನ್ನು, ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಎಲ್ಇಡಿ ಸ್ಕ್ರೀನ್ ಅಳವಡಿಸಲಾಗುವುದು. ಈ ಸಂವಾದಕ್ಕಾಗಿ ಈಗಾಗಲೇ 24 ಲಕ್ಷ ಕಾರ್ಯಕರ್ತರು(24 lakh workers) ಮೋದಿಆಯಪ್ ಡೌನ್ಲೋಡ್ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು. ಬೂತ್ ಮಟ್ಟದಲ್ಲಿ 58 ಸಾವಿರ ಸ್ಥಳಗಳಲ್ಲಿ ಈ ಆಯಪ್ ಗಳ ಮೂಲಕ ಕಾರ್ಯಕರ್ತರು ಸಂವಾದವನ್ನು ವೀಕ್ಷಿಸಲಿದ್ದಾರೆ. ಎಲ್ಇಡಿ ಸ್ಕ್ರೀನ್ ಇರುವ ಕಡೆ ಸುಮಾರು 1,000 ಕಾರ್ಯಕರ್ತರನ್ನು, ಬೂತ್ಗಳಲ್ಲಿ 200 ಕಾರ್ಯಕರ್ತರನ್ನು ಈ ಕಾರ್ಯಕ್ರಮಕ್ಕಾಗಿ ಸಂಯೋಜಿಸಲಾಗುವುದು.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5,000 ನಮೋಆಯಪ್ ಡೌನ್ ಲೋಡ್ (Download NamoApp)ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ 15 ಕಡೆ ಪ್ರಧಾನಿಯವರು ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಹೊಸ ತಂತ್ರಜ್ಞಾನ ಬಳಸಿಕೊಂಡು ಇದೇ ಮೊದಲ ಬಾರಿ ಬೃಹತ್ ಪ್ರಮಾಣದಲ್ಲಿ ನೇರ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಬಿಜೆಪಿ ಮಾತ್ರ ಗರಿಷ್ಠ ಕಾರ್ಯಕರ್ತರನ್ನು ಹೊಂದಿದೆ.
ಕಾರ್ಯಕರ್ತರ ಆಧಾರಿತ ಬಿಜೆಪಿ, ಈ ಶ್ರಮದ ಮೇಲೆ ಗೆಲ್ಲುವ ಪಕ್ಷವಾಗಿದೆ. ನರೇಂದ್ರ ಮೋದಿಯವರು ರಾಜ್ಯದಲ್ಲಿ ಪೂರ್ಣ ಬಹುಮತದ ಬಿಜೆಪಿ ಸರ್ಕಾರ ಅಧಿಕಾರಕ್ಕೆ(BJP government in power) ಬರುವ ಅಪೇಕ್ಷೆ ಹೊಂದಿದ್ದಾರೆ. ಕಾರ್ಯಕರ್ತರ ಶ್ರಮಕ್ಕೆ ನರೇಂದ್ರಮೋದಿಯವರು ಬೆನ್ನೆಲುಬಾಗಿರಲು ಸಿದ್ಧರಾಗಿದ್ದಾರೆ. ಕಡಿಮೆ ಅವಧಿಯಲ್ಲಿ ಅಭ್ಯರ್ಥಿಗಳು ಎಲ್ಲ ಮನೆಗಳಿಗೆ ಭೇಟಿ ನೀಡಲು ಕಷ್ಟ ಸಾಧ್ಯವಾದ್ದರಿಂದ ಕಾರ್ಯಕರ್ತರು ಒಂದೊಂದು ಮನೆಯನ್ನು ಎರಡರಿಂದ ಮೂರು ಬಾರಿ ಸಂಪರ್ಕಿಸಿ, ಡಬಲ್ ಇಂಜಿನ್ ಸರ್ಕಾರದ ಸಾಧನೆ ಮತ್ತು ಯೋಜನೆಗಳನ್ನು ತಿಳಿಸಲಿದ್ದಾರೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.