ಬೆಂಗಳೂರು ;- ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಜ್ಯಾದ್ಯಂತ ನಡೆಸಲಾದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ದಾಖಲೆಯ 34.76 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಿ ಆದೇಶಿಸಲಾಗಿದೆ.
ಈ ಸಂಬಂಧ ನಡೆದ ಮಾಧ್ಯಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹೈಕೋರ್ಟ್ ನ್ಯಾಯಮೂರ್ತಿ ಜಿ.ನರೇಂದರ್ ಮಾಹಿತಿ ನೀಡಿದರು.
ಹೈಕೋರ್ಟ್ನ ಬೆಂಗಳೂರು ಪ್ರಧಾನಪೀಠ, ಧಾರವಾಡ ಮತ್ತು ಕಲಬುರಗಿ ಪೀಠಗಳು, ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳು ಸೇರಿ ಒಟ್ಟು 1,020 ಲೋಕ ಅದಾಲತ್ ಪೀಠಗಳನ್ನು ಸ್ಥಾಪಿಸಲಾಗಿತ್ತು. ಇದರಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ 2.50 ಲಕ್ಷಕ್ಕೂ ಅಧಿಕ ವ್ಯಾಜ್ಯಪೂರ್ವ ಪ್ರಕರಣಗಳು 32.25 ಲಕ್ಷ ಸೇರಿ ಒಟ್ಟು 34.76 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.