ಬಾಲಿವುಡ್ ನಟ ಸೈಫ್ ಅಲಿಖಾನ್ ಪುತ್ರಿ ಸಾರಾ ಅಲಿ ಖಾನ್ ಹಾಗೂ ಕ್ರಿಕೆಟಿಗ ಶುಭ್ ಮನ್ ಗಿಲ್ ಡೇಟಿಂಗ್ ಮಾಡ್ತಿರೋದು ಗೊತ್ತೇ ಇದೆ. ಈಗಾಗ್ಲೇ ಸಾಕಷ್ಟು ಭಾರಿ ಈ ಜೋಡಿ ಕ್ಲಬ್ಬು, ಪಬ್ಬು ಅಂತ ಓಡಾಡಿ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದರು. ಆದರೆ ಇದೀಗ ಹೊಸ ಸುದ್ದಿಯೊಂದು ಹರಿದಾಡುತ್ತಿದ್ದು ಇಬ್ಬರ ಮಧ್ಯೆ ಬಿರುಕು ಮೂಡಿದೆ ಎಂದು ಹೇಳಲಾಗುತ್ತಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಶುಭ್ ಮನ್ ಗಿಲ್ ಮತ್ತು ಸಾರಾ ಅಲಿಖಾನ್ ಒಬ್ಬರನ್ನೊಬ್ಬರು ಫಾಲೋ ಮಾಡುತ್ತ, ಹಲವು ವಿಚಾರಗಳನ್ನೂ ಹಂಚಿಕೊಳ್ಳುತ್ತಿದ್ದರು. ಇದೀಗ ಇಬ್ಬರೂ ಫಾಲೋ ಮಾಡುವುದನ್ನು ನಿಲ್ಲಿಸಿದ್ದಾರೆ. ಇಬ್ಬರೂ ಒಬ್ಬರಿಗೊಬ್ಬರು ಅನ್ ಫ್ರೆಂಡ್ ಮಾಡಿಕೊಂಡಿದ್ದು, ಇಬ್ಬರ ನಡುವಿನ ಪ್ರೀತಿಗೆ ಬ್ರೇಕ್ ಬಿದ್ದಿದೆ ಎನ್ನಲಾಗುತ್ತಿದೆ.
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೈಫ್ ಅಲಿ ಖಾನ್ ಪುತ್ರಿ ಸಾರಾ ಸಿನಿಮಾಗಿಂತ ಡೇಟಿಂಗ್ ವಿಷ್ಯವಾಗಿ ಸುದ್ದಿಯಲ್ಲಿದ್ದರು. ಮುಂಬೈ ಮತ್ತು ದೆಹಲಿಯಲ್ಲಿ ಶುಭ್ ಮನ್ ಗಿಲ್ ಮತ್ತು ಸಾರಾ ಪದೇ ಪದೇ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಇಬ್ಬರ ಲವ್ವಿ ಡವ್ವಿ ವಿಚಾರವನ್ನು ಬಹಿರಂಗಗೊಳಿಸಿದ್ದರು.
ಸದ್ಯ ಬಿಟೌನ್ನಲ್ಲಿ ಸಾರಾ ಮತ್ತು ಶುಭಮನ್ ಗಿಲ್ ಲವ್ವಿ ಡವ್ವಿ ಬ್ರೇಕ್ ಅಪ್ ವಿಚಾರವೇ ಸಖತ್ ಸೌಂಡ್ ಮಾಡುತ್ತಿದೆ. ಆದರೆ ಈ ಬಗ್ಗೆ ಇಬ್ಬರು ಯಾವುದೇ ಸ್ಪಷ್ಟನೆ ನೀಡಿಲ್ಲ.