ಹಾಸನ: ಹಾಸನದ ಹಾಸನಾಂಬೆ ದೇವಿಯ ಉತ್ಸವ ಆರಂಭವಾಗಿದೆ. ಅಕ್ಟೋಬರ್ 24 ರಂದು ದೇಗುಲದ ಬಾಗಿಲು ತೆರೆಯಲಾಗಿದೆ. ನವೆಂಬರ್ 3ರವರೆಗೆ ಉತ್ಸವ ನಡೆಯುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ.
ಹಾಸನಾಂಬೆ ದೇವಿ ದರ್ಶನಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಕಾರಣ ದೇವಿ ದರ್ಶನ ವಿಳಂಬವಾಗುತ್ತಿದೆ.
ಮುಂಜಾನೆ ಎರಡು ಗಂಟೆಗೂ ಹೆಚ್ಚು ಕಾಲ ನೈವೇದ್ಯಕ್ಕಾಗಿ ಗರ್ಭಗುಡಿ ಬಾಗಿಲು ಮುಚ್ಚಿದ್ದರಿಂದ ದೇವಿ ದರ್ಶನ ಇನ್ನೂ ವಿಳಂಬವಾಗಿ ಆರಂಭವಾಗಿದೆ.
ಇದರ ನಡುವೆ ಇಡೀ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಮಳೆಯಲ್ಲಿಯೇ ಭಕ್ತರು ನಿಂತಿದ್ದರು. ಮಳೆಯನ್ನೂ ಲೆಕ್ಕಿಸದೆ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ.
ದರ್ಶನದ ಎಲ್ಲಾ ಸಾಲುಗಳು ಭರ್ತಿಯಾಗಿವೆ. 1000, 300, ಧರ್ಮ ದರ್ಶನದ ಸಾಲುಗಳು ಸಂಪೂರ್ಣ ಭರ್ತಿಯಾಗಿವೆ. ಗಂಟೆಗಟ್ಟಲೆ ಸಾಲಿನಲ್ಲಿ ನಿಂತು ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ