ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಹೆಗ್ಗನಹಳ್ಳಿ ಗ್ರಾಮದ ಬಳಿ ಸೆಕ್ಯೂರಿಟಿ ಗಾರ್ಡ್ ನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಗ್ರಾಮದ ಹೊರವಲಯದಲ್ಲಿನ ಎಂಬಸ್ಸಿ ಸ್ಪ್ರಿಂಗ್ ಗೆ ಸೇರಿದ ಸೆಕ್ಯೂರಿಟಿ ಶೆಡ್ ನಲ್ಲಿ ಕೊಲೆ ನಡೆದಿದ್ದು, ದೇವನಹಳ್ಳಿ ತಾಲ್ಲೂಕು ಬೋವಿಪಾಳ್ಯದ ನಿವಾಸಿ ಶ್ರೀನಿವಾಸ್ ಕೊಲೆಯಾಗಿರುವ ವ್ಯಕ್ತಿಯಾಗಿದ್ದಾನೆಹಳೇ ದ್ವೇಷದ ಹಿನ್ನೆಲೆ ಮಚ್ಚು, ಚಾಕು ಮತ್ತು ಕಬ್ಬಿಣದ ರಾಡ್ ನಿಂದ ಹೊಡೆದು ಈ ಹತ್ಯೆ ಮಾಡಲಾಗಿದೆ.
ಬೋವಿಪಾಳ್ಯದ ಗೋವಿಂದರಾಜು, ಮನೋಜ್, ತಿಮ್ಮರಾಜು ಮತ್ತು ಮಂಜುನಾಥ್ ಕೊಲೆ ಮಾಡಿರುವ ಆರೋಪಿಗಳಾಗಿದ್ದಾರೆ. ಈ ಹಿಂದೆ ಗಣೇಶ ವಿಸರ್ಜನೆ ಸಮಯದಲ್ಲಿ ಇವರ ನಡುವೆ ಜಗಳವಾಗಿತ್ತು ಎನ್ನಲಾಗಿದ್ದು, ಈ ಸಂಬಂಧ ವಿಶ್ವನಾಥಪುರ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ಮುಂದುವರೆಸಿದ್ದಾರೆ