ಲಕ್ನೋ: ವಿದ್ಯಾರ್ಥಿಯೊಬ್ಬ ತಾನು ಪ್ರೀತಿಯಲ್ಲಿ ಬಿದ್ದ ಕಾರಣ ಪರೀಕ್ಷೆಗೆ ಓದಲು ಸಾಧ್ಯವಾಗಿಲ್ಲ ಎಂದು ಉತ್ತರ ಪತ್ರಿಕೆಯಲ್ಲಿ ಬರೆದಿಟ್ಟು ಉತ್ತೀರ್ಣಗೊಳಿಸುವಂತೆ ಮನವಿ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶ ಬೋರ್ಡ್ ಪರೀಕ್ಷೆ ಮೌಲ್ಯ ಮಾಪನದ ವೇಳೆ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ ಶಿಕ್ಷಣ ಕ್ಷೇತ್ರದಲ್ಲಿ ಕಟ್ಟುನಿಟ್ಟಿನ ಪರೀಕ್ಷೆ ನಡೆಸಲು ಸೂಚಿಸಿದ್ದ ಸಿಎಂ ಯೋಗಿ ಆದಿತ್ಯನಾಥ್ ಅದೇಶದ ಬಳಿಕ ಲಕ್ಷ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ವಿದ್ಯಾರ್ಥಿಗಳು ವಿಚಿತ್ರ ಉತ್ತರಗಳನ್ನು ಬರೆದು ಪರೀಕ್ಷೆಯಲ್ಲಿ ಉತೀರ್ಣ ಮಾಡಲು ಕೇಳಿಕೊಂಡಿದ್ದಾರೆ. ಕೆಲ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯೊಂದಿಗೆ ಹಣವನ್ನು ಇಟ್ಟು ಉತೀರ್ಣ ಮಾಡಲು ಅಮಿಷ ಒಡ್ಡಿದ್ದಾರೆ. ಅಲ್ಲದೇ ತನಗೆ ತಾಯಿ ಇಲ್ಲ,
ಈ ಬಾರಿ ಪರೀಕ್ಷೆಯಲ್ಲಿ ನಾನು ಅನುತ್ತೀರ್ಣವಾದರೆ ತಂದೆ ತನ್ನನ್ನು ಕೊಲೆ ಮಾಡುವುದಾಗಿ ಮತ್ತೊಬ್ಬ ವಿದ್ಯಾರ್ಥಿ ಬರೆದಿದ್ದಾನೆ. ರಸಾಯನಶಾಸ್ತ್ರ ಪರೀಕ್ಷೆಯಲ್ಲಿ ತನ್ನ ಪ್ರೇಮದ ಬಗ್ಗೆ ಬರೆದಿದ್ದು, ತಾನು ಪ್ರೀತಿ ಮಾಡುವ ಯುವತಿಯ ಹೆಸರು ಹಾಗೂ ಹೃದಯದ ಚಿಹ್ನೆ ಬರೆದಿಟ್ಟಿದ್ದಾನೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಿಕ್ಷಕರೊಬ್ಬರು ಎಲ್ಲಾ ವಿದ್ಯಾರ್ಥಿಗಳು ಶಿಕ್ಷಕರ ಅನುಕಂಪ ಪಡೆಯಲು ಈ ರೀತಿ ಮಾಡಿದ್ದಾರೆ. ಹೆಚ್ಚಿನ ವಿದ್ಯಾರ್ಥಿಗಳು ಹಣ ಅಮಿಷ ನೀಡಿದ್ದಾರೆ ಎಂದು ತಿಳಿಸಿದ್ದಾರೆ.