ಬೆಂಗಳೂರು: ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಸತ್ಯಾಸತ್ಯತೆ ಅರಿಯಲು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ನೇತೃತ್ವದ ತಂಡ ಇಂದು ಸ್ಥಳಕ್ಕೆ ಭೇಟಿ ನೀಡಲಿದೆ.
ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿಪರ್ವತ ಆಶ್ರಮ ಹಾಗೂ ರಾಯಬಾಗ ತಾಲೂಕಿನ ಕಟಕಬಾವಿಯ ಕಬ್ಬಿನ ಗದ್ದೆಗೆ ಮಧ್ಯಾಹ್ನ 12 ಗಂಟೆಗೆ ನೀಡಲಿದ್ದಾರೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಬರ್ಬರ ಹತ್ಯೆ ಮತ್ತು ಮೈಸೂರು ಜಿಲ್ಲೆ ಟಿ. ನರಸೀಪುರದ ಯುವಾ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ಪ್ರಕರಣವನ್ನು ಅಸ್ತ್ರವಾಗಿ ಬಳಸಲು ಹೊರಟಿರುವ ಬಿಜೆಪಿ ಇಂದು ವಿಧಾನಸಭೆ ಮತ್ತು ವಿಧಾನ ಪರಿಷತ್ನಲ್ಲಿ ಧರಣಿ ನಡೆಸಲಿದೆ. ಬಿಜೆಪಿ ಹೀಗಾಗಿ ಈ ಎರಡೂ ಕೊಲೆಗಳನ್ನು ಖಂಡಿಸಿ ಇಂದು ವಿಪಕ್ಷ ಬಿಜೆಪಿ ಸದಸ್ಯರು ಉಭಯ ಸದನದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.