ಒಟ್ಟು 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.
ಈ ನಾಲ್ಕು ಶಾಲೆಗಳಿಗೂ ಖಾಸಗಿ ಶಿವಶಕ್ತಿ ಏಜೆನ್ಸಿಯಿಂದ ಆಹಾರ ಪದಾರ್ಥ ಸರಬರಾಜು ಆಗುತ್ತೆ. ನಿನ್ನೆ ಮಧ್ಯಾಹ್ನ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದಿದೆ. ಹೆಚ್ಚು ವಾಂತಿ ಭೇದಿಯಿಂದ ಬಳಲುತ್ತಿದ್ದ ಮೂರು ಮಕ್ಕಳಿಗೆ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ವಿದ್ಯಾರ್ಥಿಗಳಿಗೆ ದೋರನಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಸ್ಪತ್ರೆಗೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.