ಅಸ್ವಸ್ಥಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಮೈಸೂರು ತಾಲ್ಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ನಡೆದಿದೆ. ಉಳಿದಂತೆ 45ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅಸ್ವಸ್ಥಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಮೈಸೂರು ತಾಲ್ಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ನಡೆದಿದೆ. ಉಳಿದಂತೆ 45ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲುಷಿತ ನೀರು ಸೇವಿಸಿ ಕನಕರಾಜು (24) ಎಂಬ ಯುವಕ ತೀವ್ರವಾಗಿ ಅಸ್ವಸ್ಥಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮುಂಜಾಗ್ರತಾ ಕ್ರಮವಾಗಿ ಕೆ.ಸಾಲುಂಡಿ ಗ್ರಾಮಕ್ಕೆ ವೈದ್ಯಾಧಿಕಾರಿಗಳ ತಂಡದೊಂದಿಗೆ ಆಂಬ್ಯುಲೆನ್ಸ್ಗಳನ್ನು ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಕುಮಾರಸ್ವಾಮಿ ಮಾಹಿತಿ ತಿಳಿಸಿದ್ದಾರೆ.