ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕಾರ್ತಿಕ್ .ಎಸ್ (19) ಮೃತ ದುರ್ದೈವಿ.
ಶುಕ್ರವಾರ ಬೆಳಗಿನ ಜಾವ ಮನೆ ಮುಂಭಾಗದ ಬೇಲಿ ಬಳಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ.
ಏಕಾಏಕಿ ವಿದ್ಯುತ್ ಪ್ರವಹಿಸಿದ್ದು ಕಾರ್ತಿಕ್ ಬೇಲಿಯ ಮೇಲೆ ಬಿದ್ದಿದ್ದಾನೆ. ತಕ್ಷಣ ಆತನ ಕೂಗಾಟ ಕೇಳಿ ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಾರೆ, ಆದರೆ ಕಾರ್ತಿಕ್ ಬದುಕುಳಿಯಲಿಲ್ಲ.
ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಕಾರ್ತಿಕ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತ್ತಿದ್ದ. ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.