ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ತೆಲಂಗಾಣ ಮೂಲದ ಯುವತಿ ಮೃತಪಟ್ಟಿರುವ ಘಟನೆ ಅಮೆರಿಕದ ಫ್ಲೋರಿಡಾದಲ್ಲಿ ನಡೆದಿದೆ.
ಮೃತರನ್ನು ಯಾದಾದ್ರಿ ಭೋಂಗಿರ್ ಜಿಲ್ಲೆಯ ಯಾದಗರಿಪಲ್ಲಿ ಮೂಲದ ಸೌಮ್ಯಾ ರೆಡ್ಡಿ ಎಂದು ಗುರುತಿಸಲಾಗಿದೆ. ಸೌಮ್ಯಾ ರೆಡ್ಡಿ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿದ್ದರು. ಫ್ಲೋರಿಡಾ ಅಟ್ಲಾಂಟಿಕ್ ವಿಶ್ವವಿದ್ಯಾನಿಲಯದಿಂದ ಪದವಿ ಪೂರ್ಣಗೊಳಿಸಿದ್ದ ಸೌಮ್ಯ ಅಲ್ಲೇ ಉದ್ಯೋಗ ಹುಡುಕುತ್ತಿದ್ದರು.
ಭಾನುವಾರ ರಾತ್ರಿ ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದು ಸೌಮ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೌಮ್ಯಾ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ. ಆಕೆಯ ಮೃತದೇಹವನ್ನು ಭಾರತಕ್ಕೆ ತರುವಂತೆ ಆಕೆಯ ಪೋಷಕರಾದ ಕೋಟೇಶ್ವರ ರಾವ್ ಮತ್ತು ಬಾಲಾಮಣಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ತೆಲಂಗಾಣ ಸಚಿವ ಕೋಮಟಿರೆಡ್ಡಿ ವೆಂಕಟ್ ರೆಡ್ಡಿ ಸೌಮ್ಯಾ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಆಕೆಯ ಪಾರ್ಥಿವ ಶರೀರವನ್ನು ಮರಳಿ ತರಲು ಪ್ರಯತ್ನಿಸಲಾಗುತ್ತಿದೆ ಎಂದಿದ್ದಾರೆ.