ಬೆಂಗಳೂರು: ಪ್ರಧಾನಿ ಮೋದಿಗೆ ಟೀಕಿಸಿದ್ದಕ್ಕೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಹೌದು.. ಹದಿನೈದು ಜನರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದೆ.ಯುವಕನೊಬ್ಬ ಪ್ರಧಾನಿ ಮೋದಿಯನ್ನು ಟೀಕಿಸಿ ಸಿದ್ದರಾಮಯ್ಯ ಜನಪರ ಕೆಲಸ ಮಾಡುತ್ತಿದ್ದಾರೆ ಎಂದು ಹಾಡಿ ಹೊಗಳಿರುವುದೇ ಈ ಹಲ್ಲೆಯ ಹಿಂದಿನ ಕಾರಣ.
ಈ ಯುವಕನ ಮೇಲೆ ರೊಚ್ಚಿಗೆದ್ದ ಗುಂಪು ಮೇಲೆ ಹಲ್ಲೆ ಮಾಡಿ ಮೋದಿ, ಮೋದಿ ಎಂದು ಕೂಗು ಎಂದು ಬಲವಂತ ಮಾಡಿದೆ. ಆದರೆ ಯುವಕ ಇದಕ್ಕೆ ಒಪ್ಪದಿದ್ದಾಗ ಮತ್ತಷ್ಟು ಹಲ್ಲೆ ಮಾಡಿದೆ.
ನೀನು ಸಿದ್ದರಾಮಯ್ಯ ಫಾಲೋವರ್ ಆಗಿದ್ದರೆ ನಿಮ್ಮ ಮನೆಯಲ್ಲಿ ಇಟ್ಟುಕೊ ಎಂದು ಬೆದರಿಕೆ ಹಾಕಿದೆ. ಅಲ್ಲದೆ, ಮೋದಿ ಎಂದು ಹೆಸರು ಹೇಳು ಎಂದು ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಗುಂಪು ಯುವಕನ ಮೇಳ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ