ಚೆನ್ನೈನಲ್ಲಿ ಮಿಚಾಂಗ್ ಚಂಡಮಾರುತದಿಂದ ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಎಡಬಿಡದೆ ಸುರಿದ ಭಾರೀ ಮಳೆಯಿಂದಾಗಿ ಕಾಲಿವುಡ್ ಹೀರೋ ವಿಷ್ಣು ವಿಶಾಲ್ ಮನೆಯಿರುವ ಪ್ರದೇಶ ಜಲಾವೃತ್ತಗೊಂಡಿದೆ. ಈ ಪರಿಣಾಮ, ಮನೆಯಿಂದ ಯಾರೂ ಹೊರಬರಲಾರದ ಸ್ಥಿತಿಯಲ್ಲಿದ್ದಾರೆ. ಇದೇ ವೇಳೆ, ಬಾಲಿವುಡ್ ನಟ ಆಮೀರ್ ಖಾನ್ ಅವರು ನಟ ವಿಷ್ಣು ಮನೆಯಲ್ಲೇ ಲಾಕ್ ಆಗಿದ್ದಾರೆ.
ಚೆನ್ನೈನ ಕರಪಾಕ್ಕಂ ಪ್ರದೇಶದಲ್ಲಿರುವ ತಮಿಳು ನಟ ವಿಷ್ಣು ವಿಶಾಲ್ ಮನೆಗೆ ಆಮೀರ್ ಖಾನ್ ಭೇಟಿ ನೀಡಿದ್ದರು. ಪ್ರವಾಹ ಪರಿಸ್ಥಿತಿಯಿಂದಾಗಿ ವಿಷ್ಣು ವಿಶಾಲ್ ಅವರ ನಿವಾಸದಲ್ಲೇ ಆಮೀರ್ ಖಾನ್ ಸಿಲುಕಿದ್ದರು. ಈ ಸಂದರ್ಭದಲ್ಲಿ ನೀರಿನ ಮಟ್ಟ ತೀವ್ರವಾಗಿ ಏರುತ್ತಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನೆಟ್ವರ್ಕ್, ವೈಫೈ ಯಾವುದೂ ಇಲ್ಲವಾಗಿದೆ. ಇದೇ ಸಮಯದಲ್ಲಿ ವಿಷ್ಣು ವಿಶಾಲ್ ಮನೆಯೊಳಗೆ ನೀರು ನುಗ್ಗಿದ್ರಿಂದ ಸಹಾಯಕ್ಕಾಗಿ ನಟ ವಿಷ್ಣು ವಿಶಾಲ್ ಅವರು ಸೋಷಿಯಲ್ ಮೀಡಿಯಾದಲ್ಲಿ ಮೂಲಕ ಮನವಿ ಮಾಡಿದ್ದರು.