ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಭಿಷೇಕ್ ಅಂಬರೀಶ್ ಮದುವೆಗೆ ಕೌಂಟ್ಡೌನ್ ಶುರುವಾಗಿದ್ದು, ಸದ್ಯ ಅರಿಶಿನ ಶಾಸ್ತ್ರದ ಸಂಭ್ರಮದಲ್ಲಿ ಅಭಿಷೇಕ್ ಕುಟುಂಬ ಮುಳುಗಿದೆ.
ಅಭಿಷೇಕ್ ಅಂಬರೀಶ್, ಅವಿವ ಬಿಡಪ ಜೋಡಿ ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸುತ್ತಿದ್ದು ಇದೀಗ ಮದುವೆ ಎಂಬ ಮುದ್ರೆ ಒತ್ತಲು ರೆಡಿಯಾಗಿದ್ದಾರೆ. ಜೂನ್ 5ರಂದು ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ಜರುಗಲಿದೆ. ಜೂನ್ 7ರಂದು ಭರ್ಜರಿಯಾಗಿ ಆರತಕ್ಷತೆ ಸಮಾರಂಭ ನಡೆಯಲಿದೆ. ಅಭಿಷೇಕ್- ಅವಿವ ವಿವಾಹದ ಆಮಂತ್ರಣ ಪತ್ರ ವೈರಲ್ ಆಗಿದೆ. ಸದ್ಯ ವೈಟ್ ಬಣ್ಣದ ಉಡುಗೆಯಲ್ಲಿ ಅಭಿಷೇಕ್ ಅರಿಶಿನ ಶಾಸ್ತ್ರದಲ್ಲಿ ಮಿಂಚಿದ್ದಾರೆ.
2022ರ ಡಿಸೆಂಬರ್ 11ರಂದು ಅಭಿಷೇಕ್ ಹಾಗೂ ಅವಿವ ನಿಶ್ಚಿತಾರ್ಥ ನೆರವೇರಿತು. ಕುಟುಂಬದವರು, ಆಪ್ತರು, ಗಣ್ಯರ ಸಮ್ಮುಖದಲ್ಲಿ ಈ ಶುಭ ಕಾರ್ಯ ನಡೆದಿತ್ತು. ಈಗ ಮದುವೆಗೆ ಸಿದ್ಧತೆ ನಡೆಯುತ್ತಿದೆ. ಜೂನ್ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ. ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.