ರೆಬೆಲ್ ಸ್ಟಾರ್ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಅಂಬರೀಶ್ ಹಾಗೂ ಸುಮಲತಾರ ಮುದ್ದಿನ ಮಗ ಅಭಿಷೇಕ್ ಅಂಬರೀಶ್ ಸದ್ಯದಲ್ಲೇ ತಂದೆಯಾಗುತ್ತಿದ್ದಾರೆ. ಅವಿವಾ ತುಂಬು ಗರ್ಭಿಣಿಯಾಗಿದ್ದು ಪುಟ್ಟ ಕಂದನ ಆಗಮನಕ್ಕೆ ಇಡೀ ಮನೆ ಎದುರು ನೋಡುತ್ತಿದೆ. ಈ ಮಧ್ಯೆ ಅಭಿಷೇಕ್ ಪತ್ನಿ ಅವಿವಾ ಮುದ್ದಾದ ಬೇಬಿ ಬಂಪ್ ಫೋಟೋವನ್ನು ಹಂಚಿಕೊಂಡಿದ್ದಾರೆ.
ಕಳೆದ ಕೆಲ ದಿನಗಳ ಹಿಂದಷ್ಟೇ ಸೊಸೆಗೆ ಸುಮಲತಾ ಅಂಬರೀಶ್ ಸೀಮಂತ ಮಾಡಿದ್ದರು.ಮನೆಯಲ್ಲೇ ನಡೆದ ಸೀಮಂತಕ್ಕೆ ಕೇವಲ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿತ್ತು. ಇದೀಗ ತುಂಬು ಗರ್ಭಿಣಿಯಾಗಿರುವ ಅವಿವಾ ಪಿಂಕ್ ಬಣ್ಣದ ಸೀರೆಯುಟ್ಟು ತೆಗೆಸಿಕೊಂಡಿರುವ ಫೋಟೋ ಹಂಚಿಕೊಂಡಿದ್ದಾರೆ.
ಫೋಟೋ ನೋಡಿದ ಅಭಿಮಾನಿಗಳು ಮನೆಗೆ ಯಂಗ್ ಜೂನಿಯರ್ ರೆಬೆಲ್ ಸ್ಟಾರ್ ಬರಲಿ ಎಂದು ವಿಶ್ ಮಾಡುತ್ತಿದ್ದಾರೆ. ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದಪ್ಪ ಅವರುಗಳು ಕಳೆದ ವರ್ಷ ಜೂನ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಅವಿವಾ ಬಿದಪ್ಪ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದಪ್ಪ ಅವರ ಮಗಳಾಗಿದ್ದು, ಸ್ವತಃ ಫ್ಯಾಷನ್ ಡಿಸೈನರ್ ಆಗಿದ್ದಾರೆ. ಜೊತೆಗೆ ಮಾಡೆಲಿಂಗ್ನಲ್ಲಿಯೂ ತೊಡಗಿಕೊಂಡಿದ್ದಾರೆ.
ಅಭಿಷೇಕ್ ಅಂಬರೀಶ್ ಅವರ ಪತ್ನಿ ಅವಿವಾ ಬಿದಪ್ಪ ಅವರು ಬಹು ಸಮಯ ಪ್ರೀತಿ, ಎರಡೂ ಕಡೆಯ ಕುಟುಂಬದವರನ್ನು ಒಪ್ಪಿಸಿ ಕಳೆದ ವರ್ಷ ವಿವಾಹವಾಗಿದ್ದಾರೆ. ಅವಿವಾ ಬಿದಪ್ಪ ಕೆಲವೇ ದಿನಗಳಲ್ಲಿ ಮಗುವಿಗೆ ಜನ್ಮ ನೀಡಲಿದ್ದು, ಆ ಮೂಲಕ ಅಂಬರೀಶ್ ಕುಟುಂಬಕ್ಕೆ ಹೊಸ ಸದಸ್ಯರೊಬ್ಬರ ಆಗಮನ ಮತ್ತಷ್ಟು ಖುಷಿ ನೀಡಿಲಿದೆ.