ಗದಗ:- ಡಾ. ಬಾಬಾಸಾಹೇಬ ಅಂಬೇಡ್ಕರ್ ಕುರಿತು ಕೆಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನ ಖಂಡಿಸಿ ಗದಗ-ಬೆಟಗೇರಿ ಅವಳಿ ನಗರ ಬಂದ್ ಕರೆ ನೀಡಲಾಗಿದೆ.
ಗದಗ ನಗರದ ಮುಳಗುಂದ ನಾಕಾದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆ ನಡುವೆಯೇ ಅಪಘಾತ ಸಂಭವಿಸಿದೆ. ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗ್ತಿದ್ದ ವ್ಯಾನ್ ಹಾಗೂ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ.
ಪಾಲಕರೊಂದಿಗೆ ಬೈಕ್ ನಲ್ಲಿ ಶಾಲೆಗೆ ತೆರಳ್ತಿದ್ದ ಬಾಲಕಿಯ ಕಾಲಿಗೆ ಹಾಗೂ ಕೈಗೆ ಪೆಟ್ಟು ಆಗಿದೆ. ಕೂಡಲೇ ಬಾಲಕಿಯನ್ನು ಪಾಲಕರು ಆಸ್ಪತ್ರೆಗೆ ಕಳೆದುಕೊಂಡಿದ್ದಾರೆ. ಜಿಲ್ಲಾಧಿಕಾರಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ರೆ ಘಟನೆ ಸಂಭವಿಸ್ತಿರಲಿಲ್ಲ ಅಂತಾ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.