ಆಕ್ಷನ್ ದೃಶ್ಯಗಳ ಚಿತ್ರೀಕರಣದ ವೇಳೆ ಕಾಲಿಗೆ ಬಲವಾಗಿ ಪೆಟ್ಟು ಬಿಟ್ಟು ಸದ್ಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನಟ ಪೃಥ್ವಿರಾಜ್ ಸುಕುಮಾರನ್ ಶಸ್ತ್ರಚಿಕಿತ್ಸೆಯ ಬಳಿಕ ಭಾವುಕ ಫೋಸ್ಟ್ ಹಂಚಿಕೊಂಡಿದ್ದಾರೆ.
ವಿಲಾಯತ್ ಬುದ್ದ ಸಿನಿಮಾದ ಚಿತ್ರೀಕರಣದ ವೇಳೆ ಚಲಿಸುತ್ತಿದ್ದ ಬಸ್ ನಿಂದ ಬಿದ್ದು ತೀವ್ರ ಗಾಯ ಮಾಡಿಕೊಂಡಿದ್ದು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಲಿಗೆ ಗಂಭೀರವಾಗಿ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗುವಂತೆ ವೈದ್ಯರು ಸೂಚನೆ ನೀಡಿದ್ದರು. ಅದರಂತೆ ಇದೀಗ ಶಸ್ತ್ರಚಿಕಿತ್ಸಗೆ ಒಳಗಾಗಿದ್ದು ಬಳಿಕ ಭಾವುಕ ಪತ್ರವೊಂದನ್ನು ಹಂಚಿಕೊಂಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪತ್ರ ಬರೆದಿದ್ದು, ‘ನೋವಿನ ವಿರುದ್ಧ ಹೋರಾಡಿ, ಗೆದ್ದು ಮತ್ತೆ ನಾನು ಬರುತ್ತೇನೆ. ನಿಮ್ಮ ಹಾರೈಕೆಗೆ ಧನ್ಯವಾದಗಳು. ಸದ್ಯ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆರೋಗ್ಯವಾಗಿದ್ದೇನೆ. ಆತಂಕ ಪಡುವ ಅಗತ್ಯವಿಲ್ಲ. ಹಲವು ತಿಂಗಳ ಬಳಿಕ ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗುವೆ’ ಎಂದಿದ್ದಾರೆ.