ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದಾಗಿ 3 ಅಂತಸ್ತಿನ ಬೇಕರಿ ಸುಟ್ಟು ಕರಕಲಾದ ಘಟನೆ ನಡೆದಿದೆ. ವೈಷ್ಣವಿ ಐಯ್ಯಂಗಾರ್ ಬೇಕರಿ ಹರ್ಷ ಎಂಬುವವರಿಗೆ ಸೇರಿದೆ. ಬೆಂಕಿ ಅವಘಡದಿಂದಾಗಿ ಸುಮಾರು 50 ಲಕ್ಷ ಮೌಲ್ಯದ ವಸ್ತುಗಳು, ಮಿಷನರಿಗಳು ಸುಟ್ಟುಕರಕಲಾಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ.
ಬೆಳಗ್ಗೆ ಎಂದಿನಂತೆ ಬೇಕರಿ ಓಪನ್ ಮಾಡಲು ಬಂದಾಗ ವಿದ್ಯುತ್ ಅವಘಡ ಬೆಳಕಿಗೆ ಬಂದಿದೆ. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಲಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದರೆ ಅಷ್ಟು ಹೊತ್ತಿಗಾಗಲೇ ಬೇಕರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿ ಅವಘಡದಲ್ಲಿ 50 ಲಕ್ಷಕ್ಕೂ ಹೆಚ್ಚು ರೂಪಾಯಿ ನಷ್ಟವಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಮಧ್ಯರಾತ್ರಿಯೆ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಳವಳ್ಳಿ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.