ಉಡುಪಿ ;- ಬೆಂಗಳೂರಿನ ಕಂಪೆನಿಯೊಂದರಲ್ಲಿ ಅಕೌಂಟ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಮೋದ್ ಅಂಗಾರ ಜತ್ತನ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.
ಪ್ರಸ್ತುತ ವರ್ಕ್ ಪ್ರಮ್ ಹೋಮ್ನಲ್ಲಿ ಕೆಲಸ ಮಾಡಿಕೊಂಡಿದ್ದರು.
ಆದರೆ ಪ್ರಮೋದ್ ಅಂಗಾರ ಜತ್ತನ್ ಅವರು ಕಚೇರಿ ಕೆಲಸದ ಒತ್ತಡದಿಂದಲೋ ಅಥವಾ ಬೇರೆ ಯಾವುದೋ ಕಾರಣದಿಂದಲೋ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ಪತ್ನಿ ನೀಡಿದ ದೂರಿನಂತೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.