ಬೆಂಗಳೂರು: ಧಾರ್ಮಿಕ ಭಾವನೆಗೆ ದಕ್ಕೆ ಉಂಟು ಮಾಡಿದ ಆರೋಪ ಸಂಬಂಧ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ (Actor Chetan) ನಟ ಚೇತನ್ ಗೆ ನ್ಯಾಯಾಂಗ ಬಂಧನಕ್ಕೆ ನೀಡಿ (bangalore)ಬೆಂಗಳೂರಿನ 32ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಅವಹೇಳನಕಾರಿ ಟ್ವೀಟ್ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ನಟ ಚೇತನ್ ಅವರನ್ನು(police) ಶೇಷಾದ್ರಿಪುರ ಪೊಲೀಸರು ಇಂದು ಬೆಳಿಗ್ಗೆ ಬಂಧಿಸಿದ್ದರು.
ಸದ್ಯ ಚೇತನ್ ಅವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿರುವ ನಗರದ 32ನೇ ಎಸಿಎಂಎಂ ಕೋರ್ಟ್ ಚೇತನ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಉರಿಗೌಡ-ನಂಜೇಗೌಡ ವಿಚಾರದಲ್ಲಿ ಹಿಂದೂ ಧರ್ಮದ ಬಗ್ಗೆ ನಟ ಚೇತನ್ ಇತ್ತೀಚೆಗೆ ಟ್ವೀಟ್ ಮಾಡಿದ್ದರು. ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ ಎಂಬುದಾಗಿ ಶಿವಕುಮಾರ್ ಎಂಬುವವರು ದೂರು ನೀಡಿದ್ದರು’ ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು.