ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಜೊತೆ ಕೈ ಜೋಡಿಸಿರುವ ಅನೇಕರು ನೋವು ಅನುಭವಿಸುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಈಗಾಗಲೇ ಜೈಲು ಸೇರಿರುವ ಮಕ್ಕಳನ್ನು ನೋಡಿ ಕುಟುಂಬಸ್ಥರು ಕಣ್ಣಿರು ಹಾಕುತ್ತಿದ್ದಾರೆ. ಯಾರದ್ದೋ ತಪ್ಪಿಗೆ ತಮ್ಮ ಮಕ್ಕಳು ಬಲಿಪಶುಗಳಾಗುತ್ತಿದ್ದಾರೆ ಎಂದು ಮರಗುತ್ತಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾದ ಅನಿಲ್ ಕುಮಾರ್ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಇದೀಗ ಪ್ರಕರಣದ ಎ4 ರಘು ತಾಯಿ ಮಂಜುಳಮ್ಮ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ದರ್ಶನ್ ಅಭಿಮಾನಿ ಸಂಘ ಚಿತ್ರದುರ್ಗ ಜಿಲ್ಲೆಯ ಅಧ್ಯಕ್ಷರಾಗಿರುವ ರಘ ರೇಣುಕಾಸ್ವಾಮಿ ಕೊಲೆ ಕೇಸ್ ನ ಪ್ರಮುಖ ಆರೋಪಿ. ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿ ಬೆಂಗಳೂರಿಗೆ ಕರೆತಂದಿದ್ದು ಇದೇ ರಘು. ಈ ಕಾರಣದಿಂದಲೇ ರಘು ಅವರನ್ನು ಎ4 ಆರೋಪಿಯನ್ನಾಗಿ ಮಾಡಲಾಗಿದೆ. ಈಗ ಅವರು ನ್ಯಾಯಾಂಗ ಬಂಧನದಲ್ಲಿ ಇರುವಾಗಲೇ ಅವರ ತಾಯಿ ಮೃತಪಟ್ಟಿದ್ದಾರೆ.
ರಘು ತಾಯಿ ಮಂಜುಳಮ್ಮ ಕಳೆದ 1 ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿತ್ರದುರ್ಗದ ಕೋಳಿಬುರುಜನಹಟ್ಟಿ ಮನೆಯಲ್ಲಿ ಮಂಜುಳಮ್ಮ ಮೃತಪಟ್ಟಿದ್ದಾರೆ. ಅಂತ್ಯಸಂಸ್ಕಾರಕ್ಕೆ ಪುತ್ರ ರಘುನನ್ನು ಕರೆತರಲು ಕುಟುಂಬಸ್ಥರ ಮನವಿ ಮಾಡಿಕೊಂಡಿದ್ದಾರೆ.
ಅನಿಲ್ ಕುಮಾರ್ ಅವರ ತಂದೆ ಈ ಮೊದಲು ಮೃತಪಟ್ಟಿದ್ದರು. ಪ್ರಕರಣದಲ್ಲಿ ಪುತ್ರ ಅನಿಲ್ ಕುಮಾರ್ ಬಂಧನಕ್ಕೆ ಒಳಗಾಗಿದ್ದಾರೆ ಎನ್ನುವ ವಿಚಾರ ತಿಳಿದು ಅವರ ತಂದೆ ಚಂದ್ರಪ್ಪ ಶಾಕ್ ಆಗಿದ್ದರು. ಅವರು ಕೊರಗಿ ಕೊರಗಿ ನಂತರ ಹೃದಯಾಘಾತ ಆಗಿತ್ತು. ಚಂದ್ರಪ್ಪ ಅವರ ಅಂತ್ಯ ಸಂಸ್ಕಾರಕ್ಕೆ ಅನಿಲ್ ಕುಮಾರ್ ಅವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದರು. ಇದೀಗ ತಾಯಿಯ ಅಂತ್ಯ ಸಂಸ್ಕಾರಕ್ಕೆ ರಘು ನನ್ನು ಕರೆ ತರಲು ಕುಟುಂಬಸ್ಥರು ಮನವಿ ಮಾಡಿದ್ದಾರೆ.