ಮಂಗಳೂರು: ಅವಳಿ ಸಹೋದರಿಯರಿಬ್ಬರು (Twin Sisters) ಪಿಯುಸಿ (PUC) ಪರೀಕ್ಷೆಯಲ್ಲಿ ಸಮಾನವಾದ ಅಂಕಗಳನ್ನು ಪಡೆಯುವ ಮೂಲಕ ವಿಶೇಷ ಸಾಧನೆಗೈದಿದ್ದಲ್ಲದೇ ಎಲ್ಲರೂ ನಿಬ್ಬೆರಗಾಗುವಂತೆ ಮಾಡಿದ್ದಾರೆ.
ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಗಂಡಿ (Belthangady) ತಾಲೂಕಿನ ನೆರಿಯ ಗ್ರಾಮದ ಅವಳಿ ಸಹೋದರಿಯರಾದ ಸ್ಪಂದನ ಮತ್ತು ಸ್ಪರ್ಶ ಪಿಯುಸಿ ಪರೀಕ್ಷೆಯಲ್ಲಿ 600ರಲ್ಲಿ 594 ಅಂಕ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಉಜಿರೆಯ (Ujire) ಎಸ್ಡಿಎಂ ಕಾಲೇಜಿನ (SDM College) ದ್ವಿತೀಯ ಪಿಯುಸಿ ವಾಣಿಜ್ಯ (Commerce) ವಿಭಾಗದ ವಿದ್ಯಾರ್ಥಿನಿಯರಾದ ಇವರು ಸಮಾನವಾಗಿ 594 ಅಂಕ ಪಡೆದು ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ.
ಸ್ಪಂದನ ಮತ್ತು ಸ್ಪರ್ಶ ಇಂಗ್ಲಿಷ್ (English) ಮತ್ತು ಅರ್ಥಶಾಸ್ತ್ರ (Economics) ವಿಷಯಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವಿಷಯಗಳಲ್ಲಿ ಸಮಾನವಾದ ಅಂಕಗಳನ್ನು ಪಡೆದಿದ್ದಾರೆ. ಸ್ಪಂದನ ಇಂಗ್ಲಿಷ್ನಲ್ಲಿ 98 ಹಾಗೂ ಸ್ಪರ್ಶ 97 ಅಂಕಗಳನ್ನು ಪಡೆದಿದ್ದಾರೆ. ಅರ್ಥಶಾಸ್ತ್ರದಲ್ಲಿ ಸ್ಪಂದನ 98 ಅಂಕಗಳನ್ನು ಪಡೆದಿದ್ದರೆ, ಸ್ಪರ್ಶ 99 ಅಂಕಗಳನ್ನು ಪಡೆದಿದ್ದಾರೆ. ಹಿಂದಿಯಲ್ಲಿ (Hindi) ಇಬ್ಬರೂ 98 ಅಂಕಗಳನ್ನು ಪಡೆದು ಉಳಿದೆಲ್ಲಾ ವಿಷಯಗಳಲ್ಲಿ 100 ಅಂಕಗಳನ್ನು ಪಡೆದಿದ್ದಾರೆ.