ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವಕನ ಮೇಲೆ ಆಯಸಿಡ್ ದಾಳಿ ನಡೆದಿದೆ.ನಾಗೇಶ್ ಆಯಸಿಡ್ ದಾಳಿಗೆ ಒಳಗಾದ ಯುವಕ. ನಗರದ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಸೆ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ಜರುಗಿದೆ.
ದುಷ್ಕರ್ಮಿಗಳು ಆಯಸಿಡ್ ಎರಚಿ ಪರಾರಿಯಾಗಿದ್ದಾರೆ. ಸೆ.21ರಂದು ನಡೆದಿರುವ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಾಳು ಯುವಕನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗಾಯಾಳು ಹೇಳಿಕೆ ದಾಖಲಿಸಿ ದೂರು ಪಡೆದಿರುವ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಆಯಸಿಡ್ ದಾಳಿಯಲ್ಲಿ ಇದು 2 ದಾಳಿಯಾಗಿದೆ.