ಬೆಂಗಳೂರು: ಕಾನೂನಿನ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ ರಾಜ್ಯಕ್ಕೆ ಕೀರ್ತಿ ತರುವೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ (Praveen Sood)ಹೇಳಿದರು. ಈ ಸಂಬಂಧ ಬೆಂಗಳೂರಿನ ಕಚೇರಿಯಲ್ಲಿ ಮಾತನಾಡಿದ ಅವರು, ಸಿಬಿಐ ನಿರ್ದೇಶಕನಾಗುವ ನಿರೀಕ್ಷೆ ಇರಲಿಲ್ಲ. ನನ್ನ ಆಯ್ಕೆ ಅಚ್ಚರಿ ನನಗೆ ಅಚ್ಚರಿಯಾಗಿದೆ ಎಂದರು. ‘ಮೇ.25 ರಂದು ದೆಹಲಿಗೆ ತೆರಳಿ ಸಿಬಿಐ ನಿರ್ದೇಶಕನಾಗಿ ಅಧಿಕಾರ ಸ್ವೀಕರಿಸಲಿದ್ದೇನೆ. ನನ್ನ ಸೇವೆ ಗುರುತಿಸಿ ಕೇಂದ್ರ ಸರ್ಕಾರ ಮಹತ್ವದ ಹೊಣೆಗಾರಿಕೆ ನೀಡಿದೆ.
ಆ ನಂಬಿಕೆಗೆ ಚ್ಯುತಿ ಬಾರದಂತೆ ಕಾನೂನಿನ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ. ನಾನು ಪೊಲೀಸ್ ಅಧಿಕಾರಿಯಾಗಿ ಸುದೀರ್ಘವಾಗಿ ಸೇವೆ ಸಲ್ಲಿಸಿರುವ ಕರ್ನಾಟಕ ರಾಜ್ಯಕ್ಕೂ ಕೀರ್ತಿ ತರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಿಬಿಐ ಹಾಗೂ ಪೊಲೀಸ್ ಕಾರ್ಯನಿರ್ವಹಣೆ ವಿಭಿನ್ನವಾಗಿದೆ. ಸದ್ಯ ಸಿಬಿಐ ನಿರ್ದೇಶಕ ಕೆಲಸದ ಬಗ್ಗೆ ಯಾವುದೇ ಪೂರ್ವಯೋಜನೆಗಳನ್ನು ನಾನು ಹಾಕಿಕೊಂಡಿಲ್ಲ. ನನಗೆ ನೀಡಿರುವ ಜವಾಬ್ದಾರಿಯನ್ನು ಶ್ರದ್ಧೆಯಿಂದ ಕೆಲಸ ಮಾಡಿ ಘಟನೆ ತರುತ್ತೇನೆ ಎಂದು ಹೇಳಿದರು.