ಧ್ರುವ ಸರ್ಜಾ ಅವರ ಪತ್ನಿ ಪ್ರೇರಣಾ ಶಂಕರ್ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಸರ್ಜಾ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ.
ಸ್ಯಾಂಡಲ್ವುಡ್ ಆಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಮನೆಗೆ ಗೌರಿ ಗಣೇಶ ಹಬ್ಬದ ದಿನವೇ ಹೊಸ ಅತಿಥಿಯ ಆಗಮನವಾಗಿದೆ.
ಬೆಂಗಳೂರಿನ ಕೆ.ಆರ್.ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಪ್ರೇರಣಾ ಹೆರಿಯಾಗಿದ್ದು, ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ನಾರ್ಮಲ್ ಡೆಲಿವರಿಯಾಗಿದೆ.