ನವದೆಹಲಿ: ಬೇಳೆ-ಕಾಳು ಬೆಲೆ ಇಳಿಸುವಂತೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸೂಚಿಸಿದ್ದಾರೆ. ನವದೆಹಲಿಯಲ್ಲಿ ಗ್ರಾಹಕ ವ್ಯವಹಾರಗಳ ಸಚಿವಾಲಯದ ಉನ್ನತ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ ಸಚಿವರು ಈ ಬಗ್ಗೆ ತ್ವರಿತ ಕ್ರಮಕ್ಕೆ ಸಲಹೆ ನೀಡಿದ್ದಾರೆ.
ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ ತೊಗರಿ, ಕಡಲೆ, ಉದ್ದು ಮತ್ತಿತರ ಬೇಳೆಗಳ ಬೆಲೆಯಲ್ಲಿ ಶೇ.4ರಷ್ಟು ಕುಸಿತ ಕಂಡಿದೆ.
ಹಾಗಿದ್ದರೂ ವ್ಯಾಪಾರಿಗಳು ದರ ಇಳಿಸದಿರುವುದು ಗಮನಕ್ಕೆ ಬಂದಿದೆ. ಎಲ್ಲ ವರ್ತಕರು ಬೇಳೆ – ಕಾಳು ಬೆಲೆ ಕಡಿಮೆ ಮಾಡುವಂತೆ ಕ್ರಮ ಕೈಗೊಳ್ಳಿ ಎಂದು ಸಚಿವರು ಸೂಚಿಸಿದರು. ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಧಾನ್ಯಗಳು ಲಭಿಸುವಂತೆ ಮಾಡಲು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದೂ ಸಚಿವರು ಹೇಳಿದರು.