ತುಮಕೂರು: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ನಗರದ ವಿಜಯನಗರದ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ತ್ರಿಶಾಲ್ (13), ಮೃತ ದುರ್ದೈವಿಯಾಗಿದ್ದು, ನಗರದ ಸರ್ವೊದಯ ಸ್ಕೂಲ್ ನಲ್ಲಿ 7 ನೇ ತರಗತಿ ಓದುತ್ತಿದ್ದನು.
ತನ್ನ ತಾಯಿ ಶಕುಂತಲಾ ಜೊತೆ ವಿಜಯನಗರದ 2 ನೇ ಮುಖ್ಯ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಾಲಕ ಇಂದು ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್ ನೋಟ್ ಬರೆದಿಟ್ಟು ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ಜೊತೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಾಗಿದ್ದು, ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ ಮೃತದೇಹ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದಾರೆ. ಇನ್ನೂ ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.