ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಹಾಗೂ ಡಿವಿ ಸದಾನಂದ ಗೌಡರ (DV Sadananda Gowda) ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಹಿಂದೂ (Hindu) ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ’ ಎಂದು ನಳಿನ್ ಕುಮಾರ್ ಮತ್ತು ಡಿವಿಎಸ್ ಫೋಟೋ ಇರುವ ಬ್ಯಾನರ್ ಅನ್ನು ನೊಂದ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಪುತ್ತೂರಿನ (Putturu) ಬಸ್ ನಿಲ್ದಾಣದ ಬಳಿ ಹಾಕಲಾಗಿದೆ.
ಪುತ್ತೂರಿನಲ್ಲಿ ಅರುಣ್ ಪುತ್ತಿಲ ಅವರಿಗೆ ನೀಡದೇ ಅಶಾ ತಿಮ್ಮಪ್ಪ ಗೌಡರಿಗೆ ಟಿಕೆಟ್ ನೀಡಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅರುಣ್ ಪುತ್ತಿಲ ಬಂಡಾಯವಾಗಿ ಸ್ಪರ್ಧಿಸಿದ ಪರಿಣಾಮ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ 4,295 ಮತಗಳ ಅಂತರದಿಂದ ಜಯಗಳಿಸಿದ್ದರು.
ಅಶೋಕ್ ಕುಮಾರ್ ರೈ 65,923 ಮತಗಳನ್ನು ಪಡೆದರೆ ಅರುಣ್ ಕುಮಾರ್ ಪುತ್ತಿಲ 61,628 ಮತಗಳನ್ನು ಗಳಿಸಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಆಶಾ ತಿಮ್ಮಪ್ಪ 36,733 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದರು.