ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿದದಾರೆ. ಆರೋಗ್ಯ ಸಮಸ್ಯೆಯನ್ನು ಕಾರಣವನ್ನಾಗಿ ನೀಡಿ ಮನೆ ಊಟಕ್ಕೆ ಹಾಗೂ ಇತರೆ ಕೆಲವು ವಸ್ತುಗಳಿಗೆ ಬೇಡಿಕೆ ಇರಿಸಿದ್ದರು. ಮನೆ ಊಟ ಹಾಗೂ ಇತರೆ ವಸ್ತುಗಳನ್ನು ಜೈಲಿಗೆ ತರಿಸಿಕೊಳ್ಳಲು ಅನುಮತಿ ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠವು ಅರ್ಜಿಯ ವಿಚಾರಣೆ ನಡೆಸಿದ್ದು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.
ಆರೋಗ್ಯ ಸಮಸ್ಯೆ, ನಿದ್ರಾಹೀನತೆ ಕಾಡುತ್ತಿರುವುದಾಗಿ ಕಾರಣ ನೀಡಿ, ಮನೆ ಊಟ, ಹಾಸಿಗೆ, ಚಮಚ, ತಟ್ಟೆಗಳನ್ನು ತರಸಿಕೊಳ್ಳಲು ಅನುಮತಿ ಕೋರಿ ನಟ ದರ್ಶನ್ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ್ದ ಪೀಠವು, ಜೈಲು ಅಧಿಕಾರಿಗಳು ತಮ್ಮ ನಿರ್ಣಯವನ್ನು ನೀಡುವಂತೆ ಹೇಳಿದ್ದರು. ಅಂತೆಯೇ ನಿರ್ಧಾರವನ್ನು ಹೈಕೋರ್ಟ್ಗೆ ನೀಡಿದ್ದ ಜೈಲು ಅಧಿಕಾರಿಗಳು ದರ್ಶನ್ಗೆ ಜೈಲು ಊಟ ಸಾಕೆಂದಿದ್ದರು. ಜೈಲಿನ ವೈದ್ಯಾಧಿಕಾರಿ ನೀಡಿದ್ದ ವರದಿಯನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಇಂದು ಹೈಕೋರ್ಟ್ನ ಏಕಸದಸ್ಯ ಪೀಠದ ಮುಂದೆ ನಡೆದ ವಿಚಾರಣೆ ವೇಳೆ, ವೈದ್ಯಾಧಿಕಾರಿಗಳು ದರ್ಶನ್ಗೆ ಮನೆ ಊಟವನ್ನು ನಿರಾಕರಿಸಿದ್ದಾರೆ ಎಂದು ರಾಜ್ಯ ಅಭಿಯೋಜಕ ಬೆಳ್ಳಿಯಪ್ಪ ಹೇಳಿದರು. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿರುವುದಾಗಿ ತಿಳಿಸಿದರು. ಆದರೆ ದರ್ಶನ್ ಪರ ವಕೀಲರು ವೈದ್ಯಾಧಿಕಾರಿಗಳ ವರದಿ ನೋಡಿ ವಾದಮಂಡನೆಗೆ ಸಮಯ ಬೇಕಾಗುತ್ತದೆಯಾದ್ದರಿಂದ ವಾದ ಮಂಡಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಅಂತೆಯೇ ನ್ಯಾಯಾಧೀಶರು ವಿಚಾರಣೆಯನ್ನು ಸೆಪ್ಟೆಂಬರ್ 5 ಕ್ಕೆ ಮುಂದೂಡಲಾಗಿದೆ.
ಆಗಸ್ಟ್ 28 ರವೆರಗೆ ದರ್ಶನ್ರ ನ್ಯಾಯಾಂಗ ಬಂಧನ ವಿಸ್ತರಿಸಿ ಕಳೆದ ವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ನೀಡಿದೆ. ಇದೀಗ ಮನೆ ಊಟದ ಅರ್ಜಿಯ ವಿಚಾರಣೆ ಸೆಪ್ಟೆಂಬರ್ 5ಕ್ಕೆ ಮುಂದೂಡಲಾಗಿದೆ. ಈ ನಡುವೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.