ಕಾವೇರಿ ವಿಚಾರವಾಗಿ ರೈತರ ಮತ್ತು ನಾಡಿನ ಜನತೆಯ ಪರ ಧನಿ ಎತ್ತದ ಸ್ಯಾಂಡಲ್ವುಡ್ ನಟ ನಟಿಯರ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕಿಚ್ಚ ಸುದೀಪ್ ಟ್ವೀಟ್ ಮಾಡುವ ಮೂಲಕ ಕಾವೇರಿ ಹೋರಾಟಕ್ಕೆ ಬೆಂಬಲವನ್ನು ಸೂಚಿಸಿದ್ದಾರೆ.
ಇದೇ ವೇಳೆ ಕಿಚ್ಚ ಸುದೀಪ್ ಅವರು ಕಾವೇರಿ ವಿಚಾರವಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಕಾವೇರಿ ವಿವಾದಕ್ಕೆ ಬೆಂಬಲ ಸೂಚಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ, ನಮ್ಮ ಕಾವೇರಿ ನಮ್ಮ ಹಕ್ಕು, ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈ ಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ. ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ. ನೆಲ ಜಲ ಭಾಷೆ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ.
ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರ ತಮಿಳುನಾಡು ಪರವಾಗಿ ಆದೇಶಗಳನ್ನು ನೀಡುತ್ತಿದ್ದರೂ ಇದುವರೆಗೂ ಕಾವೇರಿ ಪರ ಮಾತನಾಡುತ್ತಿಲ್ಲ, ಆದರೇ, ಚುನಾವಣೆ ವೇಳೆ ರಾಜಕಾರಣಿಗಳ ಪರವಾಗಿ ಬೀದಿಗಿಳಿದು ಪ್ರಚಾರ ನಡೆಸಿತ್ತಾರೆ, ಇವರಿಗೆ ಸಾಮಾಜಿಕ ಕಳಕಳಿ ಇಲ್ಲ ಎಂಬ ಕೂಗು ಸ್ಯಾಂಡಲ್ವುಡ್ ಸ್ಟಾರ್ ಗಳ ವಿರುದ್ದ ಕೇಳಿ ಬಂದಿತ್ತು.