ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಕಳೆದ 13 ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಛತ್ತೀಸ್ಗಢದ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಮನೋಜ್ ರಜಪೂತ್ನನ್ನು ಪೊಲೀಸರು ಬಂಧಿಸಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿದ್ದ ರಜಪೂತ್ 2011 ರಿಂದ ತನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾನೆ ಎಂದು 29 ವರ್ಷದ ಸಂತ್ರಸ್ತೆ ಆರೋಪಿಸಿದ್ದಾಳೆ. ಈ ಬಗ್ಗೆ ಫೆ.22 ರಂದು ಓಲ್ಡ್ ಭಿಲಾಯ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದೀಗ ನಟನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಆರೋಪಿಯ ವಿರುದ್ಧ ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಬೆದರಿಕೆ ಪ್ರಕರಣಗಳು ದಾಖಲಾಗಿದೆ. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯ ಅಡಿಯಲ್ಲಿ ಸಹ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರುಪಡಿಸಿದಾಗ ನ್ಯಾಯಾಲಯ ಪೋಕ್ಸೊ ಪ್ರಕರಣವನ್ನು ರದ್ದುಪಡಿಸಿದೆ.