ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಮದುವೆಯಾದ ಬೆನ್ನಲ್ಲೇ ಸೋನಾಕ್ಷಿ ತಂದೆ ನಟ ಶತ್ರುಘ್ನ ಸಿನ್ಹಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲೇ ಇರುವ ನಟನಿಗೆ ಚಿಕಿತ್ಸೆ ಮುಂದುವರೆದಿದೆ.
ಇತ್ತೀಚೆಗೆ ಚುನವಣಾ ಪ್ರಚಾರ ಮತ್ತು ಮಗಳು ಸೋನಾಕ್ಷಿ ಸಿನ್ಹಾ ಮದುವೆಗೆ ತುಂಬಾ ಓಡಾಟ ಮಾಡಿದ್ದರಿಂದ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಕೆಲವರು ಹೇಳುತ್ತಿದ್ದರೆ. ಮತ್ತೆ ಕೆಲವರು ಮಗಳು ಮುಸ್ಲಿಂ ಯುವಕನನ್ನು ಮದುವೆಯಾಗೋದು ಅವರಿಗೆ ಇಷ್ಟವಿರಲಿಲ್ಲ. ಇದರಿಂದ ಸಾಕಷ್ಟು ತಲೆ ಕೆಡಿಸಿಕೊಂಡು ಆರೋಗ್ಯ ಹಾಳು ಮಾಡಿಕೊಂಡಿದ್ದಾರೆ ಎನ್ನುತ್ತಿದ್ದರು. ಅಷ್ಟೇ ಅಲ್ಲದೇ ಇದಾಗಲೇ ಮಗಳ ಮದುವೆಯ ಕುರಿತು ಭಾರಿ ಟೀಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಶತ್ರುಘ್ನ ಸಿನ್ಹಾ ಅವರು ತುಂಬಾ ಬೇಸರಿಕೊಂಡಿದ್ದರು. ಇದರಿಂದ ಅವರು ಆಘಾತಕ್ಕೆ ಒಳಗಾಗಿದ್ದರು ಎಂದೂ ಹೇಳಲಾಗುತ್ತಿದೆ.
ಇದೀಗ ಶತ್ರುಘ್ನ ಸಿನ್ಹಾಅವರ ಪುತ್ರ ಲವ್ ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ತಮ್ಮ ತಂದೆ ಕೆಲವು ದಿನಗಳಿಂದ ವೈರಲ್ ಜ್ವರದಿಂದ ಬಳಲುತ್ತಿದ್ದರು, ಆದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೇನೂ ಹೆಚ್ಚಿಗೆ ವಿಷಯವಿಲ್ಲ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎನ್ನುವ ಸುದ್ದಿಯಲ್ಲಿ ಹುರುಳಿಲ್ಲ. ತಮ್ಮ ತಂದೆಯ ಪಕ್ಕೆಲುಬುಗಳಿಗೆ ಗಾಯವಾಗಿರುವ ಸುದ್ದಿ ಬರುತ್ತಿದೆ. ಆದರೆ ಅದು ಸತ್ಯಕ್ಕೆ ದೂರವಾದದ್ದು. ಜ್ವರದಿಂದ ಬಳಲುತ್ತಿದ್ದಾರಷ್ಟೇ ಎಂದು ಮಾಹಿತಿ ನೀಡಿದ್ದಾರೆ. ಆದರೆ ಈ ಬಗ್ಗೆ ಇನ್ನು ಹೆಚ್ಚಿಗೆ ಏನನ್ನು ಹೇಳಲು ಅವರು ನಿರಾಕರಿಸಿದ್ದಾರೆ ಎಂದು ವರದಿಯಾಗಿದ್ದಾರೆ. “ನಾನು ಪ್ರತಿದಿನ ಆಸ್ಪತ್ರೆಗೆ ಹೋಗುತ್ತಿದ್ದೇನೆ, ಯಾವುದೇ ಶಸ್ತ್ರಚಿಕಿತ್ಸೆ ಆಗಿಲ್ಲ. ಅವರನ್ನು ನೋಡಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.