‘ಲೈಗರ್’ ಸಿನಿಮಾ ಸೋಲಿನಿಂದ ಕಂಗಾಲಾಗಿದ್ದ ನಟ ವಿಜಯ್ ದೇವರಕೊಂಡ ಅದರಿಂದ ಹೊರ ಬಂದಿದ್ದು ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಮಂತಾ ಜೊತೆಗಿನ ಖುಷಿ ಚಿತ್ರದಲ್ಲಿ ತೊಡಗಿಕೊಂಡಿದ್ದ ವಿಜಯ್ ಇದೀಗ ನಟಿ ಶ್ರೀಲೀಲಾ ಜೊತೆ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ ‘ಗೀತಾ ಗೋವಿಂದಂ’ ಸಿನಿಮಾದ ನಿರ್ದೇಶಕರ ಜೊತೆ ವಿಜಯ್ ಕೈಜೋಡಿಸಿದ್ದು ಈ ಭಾರಿ ವಿಜಯ್ ಗೆ ಜೋಡಿಯಾಗಿ ರಶ್ಮಿಕಾ ಬದಲು ನಟಿ ಮೃಣಾಲ್ ಬಣ್ಣ ಹಚ್ಚುತ್ತಿದ್ದಾರೆ.
ಟಾಲಿವುಡ್ ನಲ್ಲಿ ತೆರೆಕಂಡ ಗೀತಾ ಗೋವಿಂದಂ ಸಿನಿಮಾ ಸೂಪರ್ ಹಿಟ್ ಆಗಿತ್ತು. ಆ ಬಳಿಕ ನಟಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಜೋಡಿ ಸಾಕಷ್ಟು ಖ್ಯಾತಿ ಘಳಿಸಿತ್ತು. ಅಲ್ಲದೆ ಈ ಸಿನಿಮಾದ ಬಳಿಕ ರಶ್ಮಿಕಾಗೆ ಟಾಲಿವುಡ್ ನಲ್ಲಿ ಸಾಕಷ್ಟು ಡಿಮ್ಯಾಂಡ್ ಕ್ರಿಯೇಟ್ ಆಗಿತ್ತು. ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಲೂಟಿ ಮಾಡಿದ್ದ ಚಿತ್ರದ ನಿರ್ದೇಶದ ಇದೀಗ ವಿಜಯ್ ಜೊತೆ ಮತ್ತೊಮ್ಮೆ ಕೈ ಜೋಡಿಸುತ್ತಿದ್ದು ಈ ಭಾರಿ ರಶ್ಮಿಕಾ ಬದಲಿಗೆ ಮೃಣಾಲ್ ಗೆ ಮಣೆ ಹಾಕಿದ್ದಾರೆ.
ವಿಭಿನ್ನ ಕಥೆಯೊಂದಿಗೆ ಡೈರೆಕ್ಟರ್ ಪರಶುರಾಮ್, ವಿಜಯ್ ಜೊತೆ ಕೈಜೋಡಿಸಿದ್ದಾರೆ. ಈ ಹಿಂದೆ ‘ಗೀತಾ ಗೋವಿಂದಂ’ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿತ್ತು. ರಶ್ಮಿಕಾ- ವಿಜಯ್ ಜೋಡಿ ಕಮಾಲ್ ಮಾಡಿತ್ತು. ಇದೀಗ ಮತ್ತೆ ಈ ತಂಡ ಹೊಸ ಸಾಹಸಕ್ಕೆ ಕೈಹಾಕಿದೆ. ಹೊಸ ಜೋಡಿ ಜೊತೆ ಚೆಂದದ ಲವ್ ಸ್ಟೋರಿ ಹೇಳಲು ಹೊರಟಿದ್ದಾರೆ.
ಇತ್ತೀಚೆಗಷ್ಟೇ ವಿಜಯ್ ದೇವರಕೊಂಡ, ಪರಶುರಾಮ್ ಕಾಂಬಿನೇಷನ್ನಲ್ಲಿ ಹೊಸ ಸಿನಿಮಾ ಅನೌನ್ಸ್ ಆಗಿತ್ತು. ದಕ್ಷಿಣ ಚಿತ್ರರಂಗದ ಖ್ಯಾತ ನಿರ್ಮಾಪಕ ದಿಲ್ ರಾಜು, ಶಿರೀಶ್ ಈ ಚಿತ್ರಕ್ಕೆ ಹಣ ಹಾಕುತ್ತಿದ್ದು, ವಾಸು ವರ್ಮಾ ಕ್ರಿಯೇಟಿವ್ ಪ್ರೊಡ್ಯೂಸರ್ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಹೈದರಾಬಾದ್ನಲ್ಲಿ ಅದ್ಧೂರಿಯಾಗಿ ಮುಹೂರ್ತ ಕಾರ್ಯಕ್ರಮ ನೆರವೇರಿದೆ. ನಿರ್ಮಾಪಕ ಶ್ಯಾಮ್ ಪ್ರಸಾದ್ ರೆಡ್ಡಿ ಸಿನಿಮಾಗೆ ಕ್ಲ್ಯಾಪ್ ಮಾಡಿದ್ರೆ, ಗೋವರ್ಧನ್ ರಾವ್ ದೇವರಕೊಂಡ ಮೊದಲ ಶಾಟ್ ನಿರ್ದೇಶಿಸಿದರು. ಜನಪ್ರಿಯ ಹಣಕಾಸುದಾರ ಸತ್ತಿ ರಂಗಯ್ಯ ಕ್ಯಾಮೆರಾಗೆ ಚಾಲನೆ ನೀಡಿದರು. ಸದ್ಯ ಸಿನಿಮಾ ಪ್ರೀ ಪ್ರೊಡಕ್ಷನ್ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಚಿತ್ರೀಕರಣ ಪ್ರಾರಂಭವಾಗಲಿದೆ. ಆದರೆ ವಿಜಯ್ ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣರನ್ನು ಆಯ್ಕೆ ಮಾಡದೆ ಇರೋದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.