ಯುವ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಸಿನಿ ಇಂಡಸ್ಟ್ರಿಗೆ ಭರ್ಜರಿಯಾಗಿ ಎಂಟ್ರಿಕೊಟ್ಟಿರುವ ನಟ ಯುವರಾಜ್ ಕುಮಾರ್ ಗೆ ನಾಳೆ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ನಟನ ಹುಟ್ಟು ಹಬ್ಬವನ್ನು ಆಚರಿಸಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದರು. ಆದರೆ, ಅಭಿಮಾನಿಗಳಿಗೆ ನಿರಾಸೆಯಾಗಿದೆ. ತಾವು ಆ ದಿನದಂದು ಮನೆಯಲ್ಲಿ ಇರೋದಿಲ್ಲ. ಹಾಗಾಗಿ ನೀವು ಇದ್ದಲ್ಲಿಂದಲೇ ಹಾರೈಸಿ ಎಂದು ಯುವರಾಜ್ ಕುಮಾರ್ ವಿಡಿಯೋ ಮೂಲಕ ತಿಳಿಸಿದ್ದಾರೆ.
ಚುನಾವಣೆ ಮತ್ತು ಇತರ ಕಾರಣಗಳಿಂದಾಗಿ ಈ ಬಾರಿ ಯುವ ರಾಜ್ ಕುಮಾರ್, ಮನೆಯಲ್ಲಿ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎನ್ನುವ ಮಾಹಿತಿ ಸಿಕ್ಕಿದೆ. ಮನೆಯಲ್ಲಿ ಅಂದು ಇರೋದಿಲ್ಲವೆಂದದು ಸ್ವತಃ ಯುವರಾಜ್ ಅವರೇ ವಿಡಿಯೋ ಸಂದೇಶ ಕಳುಹಿಸಿದ್ದಾರೆ.
ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಮೊದಲ ಚಿತ್ರ “ಯುವ” ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ರಾಜ್ಯದ ಜನತೆ “ಯುವ” ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಚಿತ್ರ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈಗಲೂ ಜನ ಕುಟುಂಬ ಸಮೇತ ಬಂದು ಸಿನಿಮಾ ನೋಡುತ್ತಿದ್ದಾರೆ.