ಟಾಲಿವುಡ್ ಬ್ಯೂಟಿ ನಟಿ ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಇದೀಗ 3 ವರ್ಷಗಳ ನಂತರ ಮತ್ತೆ ತೆರೆಯ ಮೇಲೆ ಅಬ್ಬರಿಸಲು ಸ್ವೀಟಿ ಅನುಷ್ಕಾ ರೆಡಿಯಾಗಿದ್ದಾರೆ. ಹೊಸ ಚಿತ್ರದ ಟೈಟಲ್ ಜೊತೆ ಫಸ್ಟ್ ಲುಕ್ ರಿವೀಲ್ ಮಾಡುವ ಮೂಲಕ ನಟಿ ಸುದ್ದಿಯಲ್ಲಿದ್ದಾರೆ.
2020ರಲ್ಲಿ ತೆರೆಕಂಡ `ನಿಶಬ್ಧಂ’ ಚಿತ್ರದಲ್ಲಿ ಕಾಣಿಸಿಕೊಂಡ ಬಳಿಕ ಮತ್ತೆ ಯಾವ ಸಿನಿಮಾದಲ್ಲೂ ಅನುಷ್ಕಾ ನಟಿಸಿರಲಿಲ್ಲ ಇದೀಗ ಮತ್ತೆ ಸಿನಿಮಾಗೆ ಕಮ್ಬ್ಯಾಕ್ ಆಗಿರುವ ನಟಿ ಕನ್ನಡಿಗರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅನುಷ್ಕಾ ಶೆಟ್ಟಿ ಮೂಲತಃ ಕರ್ನಾಟಕದವರು ಹಾಗಾಗಿ ನಮ್ಮ ಕನ್ನಡದ ಹುಡುಗಿ ಕನ್ನಡ ಸಿನಿಮಾದಲ್ಲಿ ನಟಿಸಬೇಕು ಎಂಬುದು ಅಪಾರ ಅಭಿಮಾನಿಗಳ ಆಸೆಯಾಗಿತ್ತು. ಇದೀಗ ಆ ಆಸೆ ಈಡೇರಿದೆ. ನವೀನ್ ಪೋಲಿಶೆಟ್ಟಿ ಜೊತೆಗಿನ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಅನುಷ್ಕಾ ಶೆಟ್ಟಿ ಪಾದಾರ್ಪಣೆ ಮಾಡ್ತಿದ್ದಾರೆ.
ಹ್ಯಾಪಿ ಸಿಂಗಲ್ ಎನ್ನುತ್ತ ನವೀನ್ ಪೋಲಿಶೆಟ್ಟಿಗೆ ಜೋಡಿಯಾಗಿ ಅನುಷ್ಕಾ ಶೆಟ್ಟಿ ಬರುತ್ತಿದ್ದಾರೆ. ಅನ್ವಿತಾ ರಾವಾಲಿ ಶೆಟ್ಟಿಯಾಗಿ ಸ್ವೀಟಿ ಶೆಫ್ ಪಾತ್ರಕ್ಕೆ ಜೀವ ತುಂಬಿದ್ದಾರೆ. ಯುವಿ ಕ್ರಿಯೇಷನ್ ನಿರ್ಮಾಣದಲ್ಲಿ ಟೈಟಲ್ ಮೂಲಕ ಅನುಷ್ಕಾ ಹೊಸ ಚಿತ್ರ ಮೂಡಿ ಬಂದಿದ್ದು, ಈ ವರ್ಷವೇ ಸಿನಿಮಾ ತೆರೆಗೆ ಬರುತ್ತಿದೆ.
ಹ್ಯಾಪಿ ಸಿಂಗಲ್ ಮತ್ತು ರೆಡಿ ಟು ಮಿಂಗಲ್ ಎನ್ನುವ ಅನುಷ್ಕಾ ಮತ್ತು ನವೀನ್ ಅವರ ಚಿತ್ರದ ಫಸ್ಟ್ ಲುಕ್ ಈಗ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಈ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ತೆರೆ ಕಾಣಲಿದೆ. ಈ ಮೂಲಕ ಕನ್ನಡತಿ ಅನುಷ್ಕಾ ಶೆಟ್ಟಿ ಸ್ಯಾಂಡಲ್ವುಡ್ಗೆ ಎಂಟ್ರಿಕೊಡುತ್ತಿದ್ದು ಸಿನಿಮಾ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.