ಲಕ್ಷ್ಮೀ ನಿವಾಸ ಧಾರವಾಹಿಯಲ್ಲಿ ಜಾಹ್ನವಿ ಪಾತ್ರದಲ್ಲಿ ನಟಿಸುತ್ತಿರುವ ಚಂದನಾ ಅನಂತಕೃಷ್ಣ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಗುರು ಹಿರಿಯರು ನೋಡಿ ಮೆಚ್ಚಿನ ಹುಡುಗನನ್ನು ಚಂದನಾ ಮದುವೆಯಾಗುತ್ತಿದ್ದಾರೆ. ಇಂದು ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ ನಲ್ಲಿ ಕುಟುಂಬಸ್ಥರು ಗುರು ಹಿರಿಯರ ಸಮ್ಮುಖದಲ್ಲಿ ಉದ್ಯಮಿ ಪ್ರತ್ಯಕ್ಷ್ ಜೊತೆ ಚಂದನಾ ಮದುವೆ ನಡೆಯಲಿದೆ.
ಸದ್ಯ ಮೆಹೆಂದಿ ಶಾಸ್ತ್ರ, ಸಂಗೀತ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿದ್ದು, ಕ್ಯೂಟ್ ಜೋಡಿ ಬಾರೇ ಬಾರೇ ಕಲ್ಯಾಣ ಮಂಟಪಕ್ಕೆ ಬಾ ಅಂತ ಹೆಜ್ಜೆ ಹಾಕಿ ಸಂಭ್ರಮಿಸಿದೆ. ಚಂದನಾ ಖುಷಿಯಲ್ಲಿ ಲಕ್ಷ್ಮೀ ನಿವಾಸ ತಂಡ ಕೂಡ ಜೊತೆಯಾಗಿದೆ. ಮಾನಸಾ ದಂಪತಿ, ದಿಶಾ ಮದನ್ ದಂಪತಿ, ನಟ ಮಧು, ಕ್ಲೋಸ್ ಫ್ರೆಂಡ್ ನಯನಾ ದಂಪತಿ ಸೇರಿದಂತೆ ಕಿರುತೆರೆಯ ಕಲಾವಿದರು ಆತ್ಮಿಯರು ಭಾಗಿಯಾಗಿದ್ರು.
ಇನ್ನೂ, ಪ್ರತ್ಯಕ್ಷ ಮೂಲತಃ ಚಿಕ್ಕಮಗಳೂರಿನವರಾಗಿದ್ದು Mtech ವಿದ್ಯಾಭ್ಯಾಸ ಮಾಡಿದ್ದಾರೆ. ಸದ್ಯ ಬೆಂಗಳೂರಿನಲ್ಲೇ ಸ್ವಂತ ಉದ್ಯಮ ಹೊಂದಿದ್ದಾರೆ. ಸಿನಿಮಾ ಕುಟುಂಬದ ಹಿನ್ನಲೆ ಹೊಂದಿರೋ ಪ್ರತ್ಯಕ್ಷ ತಂದೆ ನಟ ದಿವಂಗತ ಉದಯ್ ಹುತ್ತಿನಗದ್ದೆ ಹಾಗೂ ತಾಯಿ ಲಲಿತಾಂಜಲಿ ಉದಯ್. ಕಿನ್ನರಿ, ಒಲವಿನ ನಿಲ್ದಾಣ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ ಲಲಿತಾಂಜಲಿ.
ಪ್ರತ್ಯಕ್ಷ್ ತಂದೆ ಉದಯ್ ಡಾ.ರಾಜ್ ಕುಮಾರ್ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ದೇವತಾ ಮನುಷ್ಯ ಚಿತ್ರದಲ್ಲಿ ನಟಿಸಿದ್ದ ನಟ ಉದಯ್ ಹುತ್ತಿನಗದ್ದೆ ಅವರು ‘ಆರಂಭ’ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದರು. ‘ಅಗ್ನಿಪರ್ವ’, ‘ಶುಭ ಮಿಲನ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.