ಬಾಲಿವುಡ್ ನಟಿ ಜಿಯಾ ಖಾನ್ ಸಾವಿನ ಪ್ರಕರಣದ ಕುರಿತು ಮಹತ್ವದ ತೀರ್ಪು ಪ್ರಕಟವಾಗಿದೆ. ಕಳೆದ ಹತ್ತು ವರ್ಷಗಳಿಂದ ನಡೆಯುತ್ತಿದ್ದ ಪ್ರಕರಣ ಇದೀಗ ಅಂತ್ಯಕಂಡಿದ್ದು ಜಿಯಾ ಸಾವಿನ ಹಿಂದೆ ನಟ ಸೂರಜ್ ಪಂಚೋಲಿ ಕಾರಣವಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ.
ಜಿಯಾ ಖಾನ್ ಮತ್ತು ಸೂರಜ್ ಪಂಚೋಲಿ ರಿಲೇಶನ್ ಶಿಪ್ ನಲ್ಲಿ ಇರುವಾಗ ನಟಿ ಜಿಯಾ ಖಾನ್ ಆತ್ಮಹತ್ಯೆಗೆ ಶರಣಾಗಿದ್ದರು. ಜಿಯಾ ಸಾವಿನ ಹಿಂದೆ ಸೂರಜ್ ಕೈವಾಡವಿದೆ ಎಂದು ಜಿಯಾ ಪೋಷಕರು ಆರೋಪಿಸಿದ್ದರು. ಸಿಕ್ಕಿರುವ ಡೆತ್ ನೋಟ್ ಆಧರಿಸಿದ ಸೂರಜ್ ಮೇಲೆ ಪ್ರಕರಣ ದಾಖಲಾಗಿತ್ತು. ಇದೀಗ ಸೂರಜ್ ನಿರಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ.
ಬಾಲಿವುಡ್ ನಟಿ ಜಿಯಾ ಖಾನ್ ಸಾವಿನ ಪ್ರಕರಣ ಬಾಲಿವುಡ್ ಸಿನಿಮಾ ರಂಗದಲ್ಲಿ ಭಾರೀ ಆಘಾತ ಮೂಡಿಸಿತ್ತು. ಚಿತ್ರರಂಗದಲ್ಲಿ ಆಗ ತಾನೆ ಮಿಂಚುತ್ತಿದ್ದ ಜಿಯಾ ಏಕಾಏಕಿ 2013ರ ಜೂನ್ 3ರಂದು ಮುಂಬೈನ ಜುಹೂ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿತ್ತು. ಈ ಸಾವಿಗೆ ಅವರ ಬಾಯ್ ಫ್ರೆಂಡ್ ಸೂರಜ್ ಪಾಂಚೋಲಿ ಕಾರಣ ಎಂದು ಹೇಳಲಾಗಿತ್ತು.
ಜಿಯಾ ಖಾನ್ ಬರೆದ ಡೆತ್ ನೋಟ್ ಆಧರಿಸಿ ಪ್ರಿಯಕರ ಸೂರಜ್ ಪಾಂಚೋಲಿ ಮೇಲೆ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲಾಗಿತ್ತು. ಆನಂತರ ಜುಲೈನಲ್ಲಿ ಸೂರಜ್ ಜಾಮೀನು ಪಡೆದರು. ಜಿಯಾ ಖಾನ್ ಅವರ ತಾಯಿ ರಬಿಯಾ ನಂತರ ವಿಶೇಷ ಮನವಿ ಸಲ್ಲಿಸಿದ ಮೇರೆಗೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು.