ಕೆಕೆಆರ್ ಪಂದ್ಯವನ್ನು ವೀಕ್ಷಿಸಲು ಅಹಮದಾಬಾದ್ಗೆ ಆಗಮಿಸಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಇದ್ದಕ್ಕಿದ್ದಂತೆಯೇ ಆಸ್ಪತ್ರೆಗೆ ದಾಖಲಾಗಿದ್ದರು. ಹೀಟ್ ಸ್ಟ್ರೋಕ್ನಿಂದ ದಿಢೀರ್ ಎಂದು ಆಸ್ಪತ್ರೆಗೆ ದಾಖಲಾಗಿದ್ದು ನಟ ಆಸ್ಪತ್ರೆಗೆ ದಾಖಲಾದ ಸುದ್ದಿ ಕೇಳಿ ಅಭಿಮಾನಿಗಳು ಕಂಗಾಲಾಗಿದ್ದರು. ಸದ್ಯ ಶಾರುಖ್ ಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗಿದೆ.
ನಟಿ ಜೂಹಿ ಚಾವ್ಲಾ ಅವರು ಆಸ್ಪತ್ರೆಗೆ ಭೇಟಿ ನೀಡಿ ಶಾರುಖ್ ಆರೋಗ್ಯ ವಿಚಾರಿಸಿದ್ದಾರೆ. ಈ ಮಧ್ಯೆ ಸುಹಾನಾ ಖಾನ್ ಅವರು ಮುಂಬೈಗೆ ಮರಳಿದ್ದು, ಅನನ್ಯಾ ಪಾಂಡೆ, ಶನಾಯಾ ಕಪೂರ್, ನವ್ಯಾ ನಂದ ಜೊತೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಶಾರುಖ್ ಅವರ ಕುರಿತು ಹೇಳಿರುವ ನಟಿ ಜೂಹಿ ಚಾವ್ಲಾ, ‘ಮೇ 21ರಂದು ಅವರಿಗೆ ಅನಾರೋಗ್ಯ ಕಾಡಿತ್ತು. ಆದಾಗ್ಯೂ ಅವರು ಮ್ಯಾಚ್ ವೀಕ್ಷಿಸಿದರು. ಈಗ ಅವರ ಆರೋಗ್ಯ ಸುಧಾರಿಸುತ್ತಿದೆ. ಅವರು ಶೀಘ್ರವೇ ಸಂಪೂರ್ಣ ಚೇತರಿಕೆ ಕಾಣಲಿದ್ದು, ಫಿನಾಲೆ ವೀಕ್ಷಿಸಲಿದ್ದಾರೆ’ ಎಂದು ಹೇಳಿದ್ದಾರೆ. ಈ ಮೂಲಕ ಶಾರುಖ್ ಅಭಿಮಾನಿಗಳು ನಿರಾಳರಾಗಿದ್ದಾರೆ.
ಬೆಳಿಗ್ಗೆ ಅವರ ಸ್ಥಿತಿ ಹದಗೆಟ್ಟ ನಂತರ, ಶಾರುಖ್ ಖಾನ್ ಅವರನ್ನು ಮಧ್ಯಾಹ್ನ 1 ಗಂಟೆಗೆ ಕೆಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಸಾಕಷ್ಟು ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ತಿಳಿಸಿರುವುದಾಗಿ ವರದಿಯಾಗಿದೆ. ಅಹಮದಾಬಾದ್ ಸೇರಿದಂತೆ ಉತ್ತರ ಭಾರತದ ಅನೇಕ ಭಾಗಗಳಲ್ಲಿ ತಾಪಮಾನ ಹೆಚ್ಚಾಗಿದೆ. ಗುಜರಾತ್ನ ರಾಜಧಾನಿಯಲ್ಲಿ 45 ಡಿಗ್ರಿಗಳಷ್ಟು ತಾಪಮಾನವಿದ್ದು, ಹವಾಮಾನ ಇಲಾಖೆ ನಗರದಲ್ಲಿ ಬಿಸಿಗಾಳಿಯ ರೆಡ್ ಅಲರ್ಟ್ ಘೋಷಿಸಿದೆ.
ಎಸ್ಆರ್ಎಚ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಜಯ ಗಳಿಸಿತ್ತು. ಆಗ ಶಾರುಖ್ ಖಾನ್ ಅವರು ಇಡೀ ಗ್ರೌಂಡ್ ಸುತ್ತಾಡಿದ್ದರು. ಅಭಿಮಾನಿಗಳತ್ತ ಕೈ ಬೀಸಿದ್ದರು. ಅಷ್ಟಾಗುತ್ತಿದ್ದಂತೆಯೇ ದಿಢೀರನೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.