ನಟಿ ಜ್ಯೋತಿಕಾ ದಕ್ಷಿಣ ಭಾರತ ಹಾಗೂ ಬಾಲಿವುಡ್ ಸಿನಿಮಾ ರಂಗದಲ್ಲಿ ಖ್ಯಾತಿ ಘಳಿಸಿದ್ದಾರೆ. ಸದ್ಯ ಜೋತಿಕಾ ಹಿಂದಿಯ ‘ಶ್ರೀಕಾಂತ್’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ತುಶಾರ್ ಹಿರಾನಂದನಿ ಇದನ್ನು ನಿರ್ದೇಶನ ಮಾಡಿದ್ದು, ರಾಜ್ಕುಮಾರ್ ರಾವ್, ಅಲಯಾ ಎಫ್, ಶರದ್ ಕೇಲ್ಕರ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಇದೀಗ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದ ನಟಿ ಆನ್ಲೈನ್ ಮೂಲಕ ಮತದಾನ ಮಾಡಿದ್ದೇನೆ ಎಂದು ಹೇಳಿಕೆ ನೀಡುವ ಮೂಲಕ ಫುಲ್ ಟ್ರೋಲ್ ಆಗಿದ್ದಾರೆ.
ಇತ್ತೀಚೆಗೆ ಚೆನ್ನೈನಲ್ಲಿ ಲೋಕಸಭಾ ಚುನಾವಣೆ ನಡೆದಿದೆ. ಅನೇಕ ಸೆಲೆಬ್ರಿಟಿಗಳು ಬಂದು ವೋಟ್ ಮಾಡಿದ್ದಾರೆ. ಆದರೆ, ಜ್ಯೋತಿಕಾ ವೋಟ್ ಮಾಡಿಲ್ಲ. ಇದನ್ನು ಅನೇಕರು ಟ್ರೋಲ್ ಮಾಡಿದ್ದರು. ಈ ಬಗ್ಗೆ ಉತ್ತರಿಸಿದ ನಟಿ, ‘ನಾನು ಪ್ರತಿ ವರ್ಷ ವೋಟ್ ಮಾಡುತ್ತೇನೆ’ ಎಂದಿದ್ದಾರೆ ಜ್ಯೋತಿಕಾ. ನಂತರ ಮತದಾನ ಪ್ರತಿ ವರ್ಷ ನಡೆಯಲ್ಲ ಎಂದು ಸಂದರ್ಶಕರು ಹೇಳಿದರು. ಇದನ್ನು ಜ್ಯೋತಿಕಾ ಒಪ್ಪಿಕೊಂಡಿದ್ದಾರೆ.
‘ಮತದಾನದ ಸಂದರ್ಭದಲ್ಲಿ ನಾವು ನಮ್ಮ ರಾಜ್ಯದಲ್ಲಿ ಇಲ್ಲದೆ ಇರಬಹುದ, ನಮಗೆ ಅನಾರೋಗ್ಯ ಆಗಿರಬಹುದು. ಅದು ನಮ್ಮ ಖಾಸಗಿ ವಿಚಾರ. ಕೆಲವೊಮ್ಮೆ ಖಾಸಗಿಯಾಗಿ ವೋಟ್ ಮಾಡಿ ಬಂದಿರುತ್ತೇವೆ, ಆನ್ಲೈನ್ನಲ್ಲಿ ವೋಟ್ ಮಾಡಿರಬಹುದು. ಎಲ್ಲವೂ ಪಬ್ಲಿಶ್ ಆಗಬೇಕೆಂದಿಲ್ಲ. ಜೀವನಕ್ಕೆ ಒಂದು ಖಾಸಗಿ ಭಾಗವಿದೆ ಮತ್ತು ಅದನ್ನು ನಾವು ಗೌರವಿಸಬೇಕು’ ಎಂದಿದ್ದಾರೆ ಜ್ಯೋತಿಕಾ.
ಆನ್ಲೈನ್ ವೋಟಿಂಗ್ ವಿಚಾರವನ್ನು ಇಟ್ಟುಕೊಂಡು ಎಲ್ಲರೂ ಟ್ರೋಲ್ ಮಾಡುತ್ತಿದ್ದಾರೆ. ‘ಮೇಡಂ ನೀವು ಸರ್ಕಾರವು ತೆಗೆದುಕೊಂಡ ಹೊಸ ನೀತಿ ನಿರ್ಧಾರದ ಬ್ರಾಂಡ್ ಅಂಬಾಸಿಡರ್ ಆಗಿರುವಂತೆ ತೋರುತ್ತಿದೆ. ಆನ್ಲೈನ್ ಮತದಾನ! ನೀವು ದಯವಿಟ್ಟು ಅದರ ಬಗ್ಗೆ ಹೇಳುವಿರೇ? ನನ್ನಂತಹ ಬಡವರಿಗೆ ಸಹಾಯ ಆಗುತ್ತದೆ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ದಯವಿಟ್ಟು ಸಹಾಯ ಮಾಡಿ, ಜ್ಯೋತಿಕಾ ರೀತಿ ಆನ್ಲೈನ್ ವೋಟ್ ಮಾಡೋದು ಹೇಗೆ’ ಎಂದು ಹಲವರು ಕಾಲೇಳೆದಿದ್ದಾರೆ.